ಮಧ್ಯಪ್ರದೇಶ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ
ರೇವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
25 ದಿನಗಳ ಹಿಂದೆ ರೇವಾದ ಹನುಮಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಮೇಕೆಗಳ ಮೇಯಿಸಲು 14 ಮತ್ತು 16 ವರ್|ದ ಬಾಲಕಿಯರು ಅರಣ್ಯ ಪ್ರದೇಶಕ್ಕೆ ಹೋಗಿದ್ದರು. ಈ ವೇಳೆ ಕಾಮುಕರು ಬಾಲಕಿಯಲ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಘಟನೆಯ ವಿಡಿಯೋವನ್ನು ಚಿತ್ರೀಕರಮ ಮಾಡಿದ್ದಾರೆ. ಅಲ್ಲದೆ, ವಿಚಾರವನ್ನು ಯಾರಿಗಾದರೂ ತಿಳಿಸಿದ್ದೇ ಆದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆಯನ್ನು ಹಾಕಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಆತಂಕದಲ್ಲಿದ್ದೆವು ಎಂದ ಪೊಲೀಸರಿಗೆ ಬಾಲಕಿಯರು ಹೇಳಿಕೆ ನೀಡಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಬಾಲಕಿಯರ ಪೋಷಕರು 7 ಮಂದಿ ವಿರುದ್ಧ ದೂರು ದಾಖಲಿಸಿದ್ದರು. ಇದರಂತೆ ಪೊಲೀಸರು ಐವರನ್ನು ಬಂಧನಕ್ಕೊಳಪಡಿಸಿದ್ದು, ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ