ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ದಿನವೇ ಮತ್ತೊಬ್ಬ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ದಿನವಾದ ಮೇ 3 ರಂದೇ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪರಿಚಿತ ಕುಕಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 37 ವರ್ಷದ ವಿವಾಹಿತ ಮೈತೇಯಿ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಗುವಾಹಟಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ದಿನವಾದ ಮೇ 3 ರಂದೇ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪರಿಚಿತ ಕುಕಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 37 ವರ್ಷದ ವಿವಾಹಿತ ಮೈತೇಯಿ ಸಮುದಾಯದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 

ಆಗಸ್ಟ್ 9 ರ (ಬುಧವಾರ) ಸಂಜೆ 4.30ಕ್ಕೆ ಬಿಷ್ಣುಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಎಫ್‌ಐಆರ್ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆಪಾದಿತ ಅಪರಾಧದ ಸ್ಥಳವು ಚುರಾಚಂದ್‌ಪುರ ಜಿಲ್ಲೆಯಲ್ಲಿರುವುದರಿಂದ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಚುರಾಚಂದ್‌ಪುರದ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಎಫ್ಐಆರ್ ಪ್ರಕಾರ, ಐಪಿಸಿ ಸೆಕ್ಷನ್ 376D (ಗ್ಯಾಂಗ್ ರೇಪ್), 354 (ಮಹಿಳೆ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ), 120B (ಅಪರಾಧ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ.

ಬಹುಸಂಖ್ಯಾತ ಕುಕಿ ಸಮುದಾಯದವರೇ ಇರು ಚುರಾಚಂದ್‌ಪುರದಲ್ಲಿ ನೆಲೆಸಿದ್ದ ಸಾವಿರಾರು ಮೈತೇಯಿ ಸಮುದಾಯದ ಕುಟುಂಬಗಳು ಹಿಂಸಾಚಾರದ ಹಿನ್ನೆಲೆಯಲ್ಲಿ ಇಂಫಾಲ್ ಕಣಿವೆಗೆ ಪಲಾಯನಗೈದಿದ್ದರು. ಅವರಲ್ಲಿ ಹಲವರು ಈಗ ಬಿಷ್ಣುಪುರ ಜಿಲ್ಲೆಯ ವಿವಿಧ ಪರಿಹಾರ ಶಿಬಿರಗಳಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com