'ಪ್ರತಿಪಕ್ಷಗಳ ಒಗ್ಗಟ್ಟಿಗೆ ಬಿಜೆಪಿ ಹೆದರಿದೆ': ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣಕ್ಕೆ ನಿತೀಶ್ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು,  ಬಿಜೆಪಿಯು ಪ್ರತಿಪಕ್ಷಗಳ ಒಗ್ಗಟ್ಟಿಗೆ ಹೆದರುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು,  ಬಿಜೆಪಿಯು ಪ್ರತಿಪಕ್ಷಗಳ ಒಗ್ಗಟ್ಟಿಗೆ ಹೆದರುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA ಸಭೆಯಲ್ಲಿ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ವಿಷಯಗಳನ್ನು ನಿರ್ಧರಿಸಲಾಗುವುದು ಎಂದು ಜೆಡಿಯು ಮುಖ್ಯಸ್ಥ ತಿಳಿಸಿದ್ದಾರೆ.

ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ನಿತೀಶ್, ಕೇಂದ್ರದ ಮೋದಿ ಸರ್ಕಾರವು 'ಇಂಡಿಯಾ' ಮೈತ್ರಿಕೂಟದಿಂದ ಆತಂಕಗೊಂಡಿರುವುದು ಸ್ಪಷ್ಟವಾಗಿದೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಹಾರವನ್ನು ಬಿಜೆಪಿ ಮುಕ್ತ ಮಾಡಲಾಗುವುದು ಎಂದು ಹೇಳಿದ್ದಾರೆ.

ಜನರ ಕಲ್ಯಾಣಕ್ಕಾಗಿ ಯಾವುದೇ ಕೆಲಸ ಮಾಡದೆ ಕೇವಲ ಪ್ರಚಾರ ಮಾಡುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್ ಅವರು, ಯಾವುದೇ ಕೆಲಸ ಆಗುತ್ತಿಲ್ಲ. ಸದನದಲ್ಲಿ ಹಿಂಸಾಚಾರ ಘಟನೆ ನಡೆದ ಸ್ಥಳಗಳ ಬಗ್ಗೆ ಯಾವುದೇ ಹೇಳಿಕೆ ನೀಡುತ್ತಿಲ್ಲ. ಅಧಿವೇಶನ ನಡೆಯುತ್ತಿದ್ದರೂ ನೀವು ಮಾತ್ರ ಹೊರಗೆ ತಿರುಗುತ್ತಿದ್ದೀರಿ ಎಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹಾಜರಾತಿಯನ್ನು ಟೀಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com