ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ

ಈ ವಾರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ...
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಈ ವಾರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ತಿಳಿಸಿದ್ದಾರೆ.
  
ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್(DPDP) ಕಾನೂನು ಭಾರತೀಯ ನಾಗರಿಕರ ಗೌಪ್ಯತೆಯನ್ನು ರಕ್ಷಿಸುವ ಗುರಿ ಹೊಂದಿದೆ ಮತ್ತು ಡಿಜಿಟಲ್ ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ನಿಯಮ ಉಲ್ಲಂಘಿಸುವ ಘಟಕಗಳಿಗೆ ಕನಿಷ್ಠ 50 ಕೋಟಿಯಿಂದ ಗರಿಷ್ಠ 250 ಕೋಟಿವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಬಳಕೆದಾರರ ಡೇಟಾವನ್ನು ನಿರ್ವಹಿಸುವ ಕಂಪನಿಗಳು ವ್ಯಕ್ತಿಯ ಮಾಹಿತಿಯನ್ನು ರಕ್ಷಿಸುವ ಅಗತ್ಯವಿದೆ ಮತ್ತು ವೈಯಕ್ತಿಕ ಡೇಟಾ ಉಲ್ಲಂಘನೆಯ ನಿದರ್ಶನಗಳನ್ನು ಡೇಟಾ ಸಂರಕ್ಷಣಾ ಮಂಡಳಿ(DPB) ಮತ್ತು ಬಳಕೆದಾರರಿಗೆ ವರದಿ ಮಾಡಬೇಕು ಎಂದು ಮಸೂದೆಯಲ್ಲಿ ಹೇಳಲಾಗಿದೆ.

ಕಳೆದ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆಯನ್ನು ಬುಧವಾರ ರಾಜ್ಯಸಭೆಯಲ್ಲೂ ಅಂಗೀಕರಿಸಲಾಗಿತ್ತು. ಬಳಿಕ ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com