ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಹರಾನ್‌ಪುರ: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಗರ ಘಟಕದ ಸಹ ಕಾರ್ಯದರ್ಶಿ ಅಭಿಷೇಕ್ ಪಂಡಿತ್ (28) ಶುಕ್ರವಾರ ತಡರಾತ್ರಿ ತನ್ನ ಮನೆಯ ಹೊರಗೆ ನಡೆದುಕೊಂಡು ಹೋಗುತ್ತಿದ್ದಾಗ ಗುಂಡು ಹಾರಿಸಲಾಗಿದೆ.

ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಪಂಡಿತ್ ಅವರು ಶತ್ರುಘ್ನ ಕಾಲೋನಿಯಲ್ಲಿರುವ ತನ್ನ ಮನೆಯ ಹೊರಗೆ ನಡೆದುಕೊಂಡು ಹೋಗುತ್ತಿದ್ದಾಗ ಗುಂಡು ಹಾರಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ತಿಳಿಸಿದ್ದಾರೆ.

ಬಲಗೈಗೆ ಗುಂಡು ತಗುಲಿದ್ದು, ಪಂಡಿತ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂಬಂಧ ಪಂಡಿತ್ ಅವರಿಂದ ದೂರು ಸ್ವೀಕರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಹಿಂದೆಯೂ ಪಂಡಿತ್ ಮೇಲೆ ಹಲ್ಲೆ ನಡೆದಿತ್ತು. ಅವರು ಸ್ಥಳೀಯರೊಂದಿಗೆ ವಿವಾದ ನಡೆದಿತ್ತು ಮತ್ತು ಆ ಆಯಾಮದಿಂದಲೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಭದ್ರತಾ ಕ್ರಮವಾಗಿ ಆಸ್ಪತ್ರೆಯ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com