ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವಂತೆ ನಾಗರಿಕರಿಗೆ ಕರೆ!

77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಕ್ಷುಬ್ಧ ಸಮಯದಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು ಮತ್ತು ಇದು ಇತರರಿಗೆ ಭರವಸೆಯ ದಾರಿದೀಪವಾಗಿದೆ ಎಂದು ಹೇಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು
Updated on

ನವದೆಹಲಿ: 77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಕ್ಷುಬ್ಧ ಸಮಯದಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು ಮತ್ತು ಇದು ಇತರರಿಗೆ ಭರವಸೆಯ ದಾರಿದೀಪವಾಗಿದೆ ಎಂದು ಹೇಳಿದರು.

ದೇಶವು ಮುನ್ನಡೆದ ಹಲವಾರು ಮಾರ್ಗಗಳ ಬಗ್ಗೆ ಮಾತನಾಡಿದ ದ್ರೌಪದಿ ಮುರ್ಮು, ಭಾರತ ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿದೆ ಮತ್ತು ಹೆಚ್ಚಿನ ಜಿಡಿಪಿ ಬೆಳವಣಿಗೆಯನ್ನು ದಾಖಲಿಸಿದೆ. ಪ್ರಪಂಚದಾದ್ಯಂತ ಅಭಿವೃದ್ಧಿ ಮತ್ತು ಮಾನವೀಯ ಗುರಿಗಳನ್ನು ಉತ್ತೇಜಿಸುವಲ್ಲಿ ಭಾರತವು ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಜಿ-20 ಶೃಂಗಸಭೆಯಂತಹ ಅನೇಕ ಅಂತರಾಷ್ಟ್ರೀಯ ವೇದಿಕೆಗಳ ನಾಯಕತ್ವವನ್ನು ವಹಿಸಿಕೊಂಡಿದೆ. ಅಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿ 2020 ಮತ್ತು ಚಂದ್ರಯಾನ-3 ರ ಯಶಸ್ವಿ ಉಡಾವಣೆ ಶಿಕ್ಷಣ ಮತ್ತು ವಿಜ್ಞಾನ ಕ್ಷೇತ್ರಗಳಲ್ಲಿನ ಪ್ರಗತಿಯ ಸೂಚಕ ಎಂದು ತಿಳಿಸಿದರು. 

ನಮ್ಮ ದೇಶದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಗಮನ ನೀಡಲಾಗುತ್ತಿದೆ. ಆರ್ಥಿಕ ಸಬಲೀಕರಣವು ಕುಟುಂಬ ಮತ್ತು ಸಮಾಜದಲ್ಲಿ ಮಹಿಳೆಯ ಸ್ಥಾನವನ್ನು ಬಲಪಡಿಸುತ್ತದೆ. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವಂತೆ ನಾಗರಿಕರನ್ನು ಒತ್ತಾಯಿಸಿದ ರಾಷ್ಟ್ರಪತಿ, ಪರಿಸರಕ್ಕಾಗಿ ಸ್ಥಳೀಯ, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಪ್ರಯತ್ನಗಳನ್ನು ಮಾಡುವುದು ಅಗತ್ಯವಾಗಿದೆ. ಮಹಿಳೆಯರ ಅಭಿವೃದ್ಧಿ ನಮ್ಮ ಸ್ವಾತಂತ್ರ್ಯ ಹೋರಾಟದ ಆದರ್ಶಗಳಲ್ಲಿ ಒಂದಾಗಿದೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com