ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್ ಗೆ ಬಿಸಿತುಪ್ಪವಾದ ಎಎಪಿ! ಎಚ್ಚರಿಕೆ ಸಂದೇಶ ರವಾನೆ

2024ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಬಿಸಿತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದರೆ INDIA ಒಕ್ಕೂಟದಿಂದ ಹೊರ ಬರುವುದಾಗಿ ಆಮ್ ಆದ್ಮಿ ಪಕ್ಷ ಬುಧವಾರ ಎಚ್ಚರಿಕೆ ನೀಡಿದೆ.
ವಿರೋಧಪಕ್ಷಗಳ  INDIA ಮೈತ್ರಿಕೂಟದ ನಾಯಕರು
ವಿರೋಧಪಕ್ಷಗಳ INDIA ಮೈತ್ರಿಕೂಟದ ನಾಯಕರು

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಬಿಸಿತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದರೆ INDIA ಒಕ್ಕೂಟದಿಂದ ಹೊರ ಬರುವುದಾಗಿ ಆಮ್ ಆದ್ಮಿ ಪಕ್ಷ ಬುಧವಾರ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಮತ್ತು ಎಎಪಿ ವಿರೋಧಪಕ್ಷಗಳ ಒಕ್ಕೂಟವಾದ INDIAದ (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ)ಸದಸ್ಯ ಪಕ್ಷಗಳಾಗಿವೆ.

ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ಹೇಳಿಕೆ ಹಿನ್ನೆಲೆಯಲ್ಲಿ ಮುಂಬೈಯಲ್ಲಿ ನಡೆಯಲಿರುವ INDIA ಒಕ್ಕೂಟದ ಮೂರನೇ ಸಭೆಯಲ್ಲಿ ಪಾಲ್ಗೊಳ್ಳಲುವ ಕುರಿತು ಪಕ್ಷದ ಉನ್ನತ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಎಎಪಿ ಮುಖ್ಯ ವಕ್ತಾರ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತೆ ಪರಾಮರ್ಶೆಗಾಗಿ ದೆಹಲಿ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸಿದ್ದು, ಪಕ್ಷ ಸಂಘಟನೆಯನ್ನು ಬಲಪಡಿಸುವ ಮಾರ್ಗಗಳು ಮತ್ತು ವಿಧಾನಗಳ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಮುಖಂಡರು ಒಗ್ಗಟ್ಟಾಗಿ ಮತ್ತು ಜನರೊಂದಿಗೆ ಸಂಪರ್ಕದಲ್ಲಿರಲು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಕ್ಕರ್, ದೆಹಲಿಯ ಎಲ್ಲಾ 7 ಲೋಕಸಭೆ ಸ್ಥಾನಗಳಲ್ಲಿ ಸ್ಪರ್ಧಿಸಲು ನಾಯಕರಿಗೆ ಆದೇಶ ನೀಡಲಾಗಿದೆ ಎಂದು ಲಂಬಾ ಹೇಳಿದರು. ಅವರ ಹೇಳಿಕೆ ಹಿನ್ನೆಲೆಯಲ್ಲಿ ಮಾತನಾಡಿರುವ ಕಕ್ಕರ್, 
ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಕಣಕ್ಕಿಳಿಯಲು ಬಯಸಿದರೆ, ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳುವ ಮೂಲಕ ಅದರಿಂದ ಹೊರಬರುವ ಸುಳಿವು ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com