ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ಕೋರಿ 'ಸುಪ್ರೀಂ'ಗೆ ತಮಿಳುನಾಡು ಮನವಿ; ಸೋಮವಾರ ವಿಚಾರಣೆ

ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಿತ್ಯ 24,000 ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ, ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮನವಿಯನ್ನು ಸೋಮವಾರ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಿತ್ಯ 24,000 ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ, ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮನವಿಯನ್ನು ಸೋಮವಾರಕ್ಕೆ ಪಟ್ಟಿ ಮಾಡುವಂತೆ ಸರ್ವೋಚ್ಛ ನ್ಯಾಯಾಲಯ ಶುಕ್ರವಾರ ಸೂಚಿಸಿದೆ.

ಇಂದು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಮನವಿಯನ್ನು ಪ್ರಸ್ತಾಪಿಸಿದರು. ಕಾವೇರಿ ಜಲವಿವಾದದ ವಿಷಯದಲ್ಲಿ ನ್ಯಾಯಾಲಯವು ತನ್ನ ಅರ್ಜಿಯನ್ನು ಪಟ್ಟಿ ಮಾಡುವಂತೆ ಒತ್ತಾಯಿಸಿದ ರೋಹಟಗಿ, ಬೆಳೆದು ನಿಂತಿರುವ ಬೆಳೆಗಳಿಗೆ ತುರ್ತಾಗಿ ನೀರಿನ ಅಗತ್ಯವಿದೆ ಎಂದು ಹೇಳಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯುಎಂಎ) ಆಗಸ್ಟ್ 11, 2023 ರಂದು ಕರ್ನಾಟಕದ ಕೆಆರ್‌ಎಸ್‌ನಿಂದ ಮುಂದಿನ 15 ದಿನಗಳವರೆಗೆ ಬಿಡುಗಡೆ ಮಾಡಬೇಕಿದ್ದ ನೀರಿನ ಪ್ರಮಾಣವನ್ನು 15000 ಕ್ಯೂಸೆಕ್‌ ನಿಂದ 10000(ದಿನಕ್ಕೆ 0.864 ಟಿಎಂಸಿ) ಕ್ಯೂಸೆಕ್‌ಗೆ ಇಳಿಸಿದೆ ಎಂದು ಮನವಿಯಲ್ಲಿ ತಮಿಳುನಾಡು ವಾದಿಸಿದೆ.

ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ದಾಖಲಾಗಿರುವಂತೆ ಆಗಸ್ಟ್ 11ರಿಂದ 14ರವರೆಗೆ ಕ್ರಮವಾಗಿ 6,148, 4,852, 4,453 ಮತ್ತು 4,000 ಕ್ಯುಸೆಕ್‌ ನೀರು ಹರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಉಲ್ಲೇಖಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com