ಮಣಿಪುರದಲ್ಲಿ ಮತ್ತೆ ಹಿಂಸಾಚಾರ
ಮಣಿಪುರದಲ್ಲಿ ಮತ್ತೆ ಹಿಂಸಾಚಾರ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಯಲ್ಲಿ ಮೂವರು ಬಲಿ

ಜನಾಂಗೀಯ ಕಲಹ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಶುಕ್ರವಾರ ಉಖ್ರುಲ್ ಜಿಲ್ಲೆಯ ಕುಕಿ ಥೋವೈ ಗ್ರಾಮದಲ್ಲಿ ಭಾರೀ ಗುಂಡಿನ ದಾಳಿಯ ನಂತರ ಮೂವರು ಯುವಕರ ವಿರೂಪಗೊಂಡ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published on

ಇಂಫಾಲ: ಜನಾಂಗೀಯ ಕಲಹ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಶುಕ್ರವಾರ ಉಖ್ರುಲ್ ಜಿಲ್ಲೆಯ ಕುಕಿ ಥೋವೈ ಗ್ರಾಮದಲ್ಲಿ ಭಾರೀ ಗುಂಡಿನ ದಾಳಿಯ ನಂತರ ಮೂವರು ಯುವಕರ ವಿರೂಪಗೊಂಡ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಿಟನ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಿಂದ ಮುಂಜಾನೆ ಭಾರೀ ಗುಂಡಿನ ಸದ್ದು ಕೇಳಿಬಂದಿದೆ. ಸುತ್ತಮುತ್ತಲಿನ ಗ್ರಾಮಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಪೊಲೀಸರು ಸಂಪೂರ್ಣ ಶೋಧ ನಡೆಸಿದ ನಂತರ 24 ವರ್ಷದಿಂದ 35 ವರ್ಷ ವಯಸ್ಸಿನ ಮೂವರು ಯುವಕರ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂವರ ಮೃತ ದೇಹಗಳು ಹರಿತವಾದ ಚಾಕುಗಳನ್ನು ಬಳಸಿ ಮಾಡಿದ ಗಾಯದ ಗುರುತುಗಳನ್ನು ಹೊಂದಿದ್ದು, ಅವರ ಕೈಕಾಲುಗಳನ್ನು ಸಹ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದವು, ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿತ್ತು.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೀಟೈಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು -- ನಾಗಾಗಳು ಮತ್ತು ಕುಕಿಗಳು -- ಶೇಕಡಾ 40 ಕ್ಕಿಂತ ಸ್ವಲ್ಪ ಹೆಚ್ಚು ಮತ್ತು ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com