ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ಸೂಪರ್ ಸ್ಟಾರ್ ರಜನಿಕಾಂತ್; ವಿಡಿಯೋ ವೈರಲ್

ತಮಿಳುಚಿತ್ರರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ಯೋಗಿ ಆದಿತ್ಯನಾಥ್ ಪಾದಮುಟ್ಟಿ ನಮಸ್ಕರಿಸುತ್ತಿರುವ ರಜನಿಕಾಂತ್.
ಯೋಗಿ ಆದಿತ್ಯನಾಥ್ ಪಾದಮುಟ್ಟಿ ನಮಸ್ಕರಿಸುತ್ತಿರುವ ರಜನಿಕಾಂತ್.

ಲಖನೌ: ತಮಿಳುಚಿತ್ರರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶನಿವಾರ ಲಖನೌದಲ್ಲಿ ನಟ ರಜನಿಕಾಂತ್‌ ಅವರು ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾದರು, ಈ ವೇಳೆ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಜಿನಿ ಸರಳತೆ ನೋಡಿ ಅವರ ಫ್ಯಾನ್ಸ್‌ ಮೆಚ್ಚಿಕೊಂಡಿದ್ದಾರೆ.

ಉತ್ತರಪ್ರದೇಶಕ್ಕೆ ಭೇಟಿ ನೀಡಿರುವ ರಜನಿಕಾಂತ್ ಅವರು ಇಂದು ಸಮಾಜವಾದ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದರು.

ಲಖನೌನಲ್ಲಿರುವ ಅಖಿಲೇಶ್ ಅವರ ನಿವಾಸಕ್ಕೆ ಭೇಟಿ ನೀಡಿದ ರಜನಿಕಾಂತ್ ಅವರು, ಅಖಿಲೇಶ್ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಖಿಲೇಶ್ ಅವರ ಪರಿಚಯವಾಗಿತ್ತು. ಅಂದಿನಿಂದಲೂ ನಾವಿಬ್ಬರೂ ಸ್ನೇಹಿತರಾಗಿದ್ದೇವೆ. ಆ ಭೇಟಿ ಬಳಿಕ ಇಬ್ಬರೂ ಫೋನ್ ಮೂಲಕ ಮಾತುಕತೆ ನಡೆಸುತ್ತಿದ್ದೆವು. 5 ವರ್ಷಗಳ ಹಿಂದೆ ಚಿತ್ರೀಕರಣ ಹಿನ್ನೆಲೆಯಲ್ಲಿ ಉತ್ತರಪ್ರದೇಶಕ್ಕೆ ಭೇಟಿ ನೀಡಿದ್ದೆ. ಆದರೆ, ಅಂದು ಅಖಿಲೇಶ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅವರನ್ನು ಭೇಟಿ ಮಾಡಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com