ಜಮ್ಮು-ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಹೇಳಿದೆ.
Published: 21st August 2023 11:40 PM | Last Updated: 22nd August 2023 05:08 PM | A+A A-

ಭಾರತೀಯ ಸೇನೆ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಹೇಳಿದೆ.
ಗುಂಡೇಟಿನಿಂದ ಸಾಯುವುದಕ್ಕೂ ಮೊದಲು ಗಡಿ ನಿಯಂತ್ರಣ ರೇಖೆಯನ್ನು ದಾಟಿದ ಹಿನ್ನೆಲೆಯಲ್ಲಿ ಮೃತ ಉಗ್ರರ ದೇಹ ಸಿಕ್ಕಿಲ್ಲ ಎಂದು ಸೇನೆಯ ವಕ್ತಾರರು ಹೇಳಿದ್ದಾರೆ.
ಬಾಲಾಕೋಟ್ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದ ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಮ್ಯಾಗಜೀನ್‌ಗಳು, 30 ಸುತ್ತುಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಪಾಕಿಸ್ತಾನಿ ಮೂಲದ ಕೆಲವು ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಬಾಲಾಕೋಟ್ ಸೆಕ್ಟರ್ ನಿಂದ ಎಲ್ಒಸಿ ದಾಟಲು ಉಗ್ರರು ಸಿದ್ಧರಾಗಿದ್ದರು ಎಂಬ ಮಾಹಿತಿ ಬಹು ಏಜೆನ್ಸಿಗಳು ಮತ್ತು ಪೊಲೀಸರಿಂದ ಪಡೆದ ಗುಪ್ತಚರ ಮೂಲಗಳಿಂದ ಬಂದಿದ್ದಾಗಿ ಜಮ್ಮು ಮೂಲದ ರಕ್ಷಣಾ ಪಿಆರ್‌ಒ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ತಿಳಿಸಿದ್ದಾರೆ.