ಹಿಮಾಚಲದಲ್ಲಿ ಭೂಕುಸಿತ; ಕುಸಿದು ಬಿದ್ದ 8 ಕಟ್ಟಡಗಳು, ಶಿಮ್ಲಾದಲ್ಲಿ ಮತ್ತೊಂದು ಮೃತದೇಹ ಪತ್ತೆ

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅನ್ನಿ ಪ್ರದೇಶದಲ್ಲಿ ಗುರುವಾರ ಭಾರಿ ಭೂಕುಸಿತ ಸಂಭವಿಸಿದ್ದು, ಅಸುರಕ್ಷಿತವೆಂದು ಘೋಷಿಸಲಾದ ಕನಿಷ್ಠ ಎಂಟು ಕಟ್ಟಡಗಳು ಕುಸಿದು ಬಿದ್ದಿವೆ. ಹಲವು ಜನ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕುಸಿದು ಬೀಳುತ್ತಿರುವ ಕಟ್ಟಡಗಳು.
ಕುಸಿದು ಬೀಳುತ್ತಿರುವ ಕಟ್ಟಡಗಳು.
Updated on

ಶಿಮ್ಲಾ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅನ್ನಿ ಪ್ರದೇಶದಲ್ಲಿ ಗುರುವಾರ ಭಾರಿ ಭೂಕುಸಿತ ಸಂಭವಿಸಿದ್ದು, ಅಸುರಕ್ಷಿತವೆಂದು ಘೋಷಿಸಲಾದ ಕನಿಷ್ಠ ಎಂಟು ಕಟ್ಟಡಗಳು ಕುಸಿದು ಬಿದ್ದಿವೆ. ಹಲವು ಜನ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ವಸತಿ ಕಟ್ಟಡಗಳು, ಅಂಗಡಿಗಳು, ಬ್ಯಾಂಕ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ನಾಲ್ಕೈದು ದಿನಗಳ ಹಿಂದೆ ಬಿರುಕು ಬಿಟ್ಟಿದ್ದವು ಎಂದು ಸ್ಥಳದಲ್ಲಿದ್ದ ಅನ್ನಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್(ಎಸ್‌ಡಿಎಂ) ನರೇಶ್ ವರ್ಮಾ ಅವರು ತಿಳಿಸಿದ್ದಾರೆ.

ಈ ಕಟ್ಟಡಗಳನ್ನು ಅಸುರಕ್ಷಿತವೆಂದು ಘೋಷಿಸಿ, ಅದರಲ್ಲಿದ್ದ ಜನರನ್ನು ಇತ್ತೀಚೆಗೆ ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾನಿಯ ಮೌಲ್ಯಮಾಪನವನ್ನು ಮಾಡಲಾಗುತ್ತಿದೆ ಮತ್ತು ಅನ್ನಿಯ ರಾಷ್ಟ್ರೀಯ ಹೆದ್ದಾರಿ 305 ರ ಉದ್ದಕ್ಕೂ ಇರುವ ಕೆಲವು ಅಸುರಕ್ಷಿತ ಕಟ್ಟಡಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತೆರವು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಮಧ್ಯೆ, ಶಿಮ್ಲಾದ ಶಿವ ದೇವಾಲಯದಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಇಂದು ಮತ್ತೊಂದು ಮೃ ದೇಹ ಪತ್ತೆಯಾಗಿದೆ. ಆದರೆ ಕುಲುವಿನ ಅನ್ನಿ ಪ್ರದೇಶದಲ್ಲಿ ಕಟ್ಟಡ ಕುಸಿತದ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಶಿಮ್ಲಾದ ಮೂರು ಪ್ರಮುಖ ಭೂಕುಸಿತಗಳ ಅವಶೇಷಗಳಿಂದ ಇದುವರೆಗೆ 25 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿಮ್ಲಾದ ಎಸ್ಪಿ ಸಂಜೀವ್ ಕುಮಾರ್ ಗಾಂಧಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com