ಕೋಲ್ಕತ್ತಾ: ಪಾಕ್ ಗೂಢಚಾರನ ಬಂಧನ, ಸೂಕ್ಷ್ಮ ದಾಖಲೆಗಳು ವಶ
ಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪದ ಮೇರೆಗೆ ಬಿಹಾರದ ನಿವಾಸಿಯೊಬ್ಬರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ದೊರೆತ ಖಚಿತ ಮಾಹಿತಿ ಮೇರೆಗೆ ಹೌರಾದ ಮನೆಯಿಂದ ಆತನನ್ನು ಶುಕ್ರವಾರ ಬಂಧಿಸಲಾಗಿದ್ದು, ದೇಶದ ಸುರಕ್ಷತೆಗೆ ಸಂಬ
Published: 26th August 2023 01:07 PM | Last Updated: 26th August 2023 01:07 PM | A+A A-

ಕೊಲ್ಕತ್ತಾದಲ್ಲಿ ಪೊಲೀಸರಿಂದ ಜನರ ತಪಾಸಣೆಯ ಚಿತ್ರ
ಕೋಲ್ಕತ್ತಾ: ಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪದ ಮೇರೆಗೆ ಬಿಹಾರದ ನಿವಾಸಿಯೊಬ್ಬರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ದೊರೆತ ಖಚಿತ ಮಾಹಿತಿ ಮೇರೆಗೆ ಹೌರಾದ ಮನೆಯಿಂದ ಆತನನ್ನು ಶುಕ್ರವಾರ ಬಂಧಿಸಲಾಗಿದ್ದು, ದೇಶದ ಸುರಕ್ಷತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಆತ ಪಾಕಿಸ್ತಾನಕ್ಕೆ ರವಾನೆ ಮಾಡಿರುವುದು ಕಂಡುಬಂದಿದೆ. ಅನೇಕ ಗಂಟೆಗಳ ವಿಚಾರಣೆ ನಂತರ ಆತನನ್ನು ಬಂಧಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
ಆರೋಪಿ ತನ್ನ ಮೊಬೈಲ್ ಫೋನ್ ನಲ್ಲಿ ಫೋಟೋಗಳು, ವಿಡಿಯೋಗಳು ಮತ್ತು ಆನ್ ಲೈನ್ ಚಾಟ್ ಮೂಲಕ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಶಂಕಿತ ಗುಪ್ತಚರ ದಳಕ್ಕೆ ಹಂಚಿಕೊಂಡಿರುವುದು ತಿಳಿದುಬಂದಿದೆ. ಆತನನ್ನು ಇಂದು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.