ಮಧುರೈ ರೈಲಿನಲ್ಲಿ ಬೆಂಕಿ ಅವಘಡ: ರೈಲ್ವೆ ಸುರಕ್ಷತಾ ಆಯುಕ್ತರಿಂದ ತನಿಖೆ

ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.
ಹೊತ್ತಿ ಉರಿದ ಬೋಗಿ
ಹೊತ್ತಿ ಉರಿದ ಬೋಗಿ
Updated on

ಚೆನ್ನೈ: ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.

ಬೆಂಗಳೂರಿನ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತ ಎ ಎಂ ಚೌಧರಿ ಅವರು ಭಾನುವಾರ ಮಧುರೈನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಂಕೀರ್ಣದಲ್ಲಿರುವ ಡಿಆರ್‌ಎಂ ಸಮ್ಮೇಳನ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.

"ಘಟನೆಯ ಬಗ್ಗೆ ಮಾಹಿತಿ ಹೊಂದಿರುವ ಮತ್ತು ಸಾಕ್ಷ್ಯ ನೀಡಲು ಬಯಸುವ ಯಾವುದೇ ಸಾರ್ವಜನಿಕರು ಮಧುರೈ ಆಗಮಿಸಿ ಚೌಧರಿ ಅವರಿಗೆ ಮಾಹಿತಿ ನೀಡಬಹುದು ಅಥವಾ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆಯಬಹುದು" ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇಂದು ಬೆಳಗಿನ ಜಾವ ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 10 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com