
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಶೋಭಾ ಯಾತ್ರೆಗೂ ಮುನ್ನ ಕೋಮು ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತ, ಸೆಕ್ಷನ್ 144 ಜಾರಿ
ಕೋಲ್ಕತ್ತದಿಂದ ಉತ್ತರಕ್ಕೆ 30 ಕಿ.ಮೀ ದೂರದಲ್ಲಿ ದತ್ತಪುಕುರ್ ಪೊಲೀಸ್ ಠಾಣಾ ವ್ಯಾಪ್ತಿಯ ನೀಲ್‌ಗಂಜ್‌ನ ಮೋಶ್‌ಪೋಲ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.
Three people killed in blast at firecracker factory in West Bengal's North 24 Paraganas district: Police
— Press Trust of India (@PTI_News) August 27, 2023
ಮೇ ತಿಂಗಳಲ್ಲಿ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಇದೇ ರೀತಿಯ ಸ್ಫೋಟ ಸಂಭವಿಸಿ 12 ಜನರು ಸಾವನ್ನಪ್ಪಿದ್ದರು.