ಸಿಒಪಿ-28 ಶೃಂಗಸಭೆ: ದುಬೈ ತಲುಪಿದ ಪ್ರಧಾನಿ ಮೋದಿ, ಹವಾಮಾನ ಬದಲಾವಣೆ ತಗ್ಗಿಸುವ ಬಗ್ಗೆ ವಿಶ್ವನಾಯಕರೊಂದಿಗೆ ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ದುಬೈಗೆ ಭೇಟಿ ನೀಡಿದ್ದು, ವಿಶ್ವಸಂಸ್ಥೆಯ ಕಾನ್ಫರೆನ್ಸ್‌ ಆಫ್‌ ಪಾರ್ಟೀಸ್‌(ಸಿಒಪಿ-28) ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.
ದುಬೈನಲ್ಲಿ ಪ್ರಧಾನಿ ಮೋದಿ
ದುಬೈನಲ್ಲಿ ಪ್ರಧಾನಿ ಮೋದಿ
Updated on

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ದುಬೈಗೆ ಭೇಟಿ ನೀಡಿದ್ದು, ವಿಶ್ವಸಂಸ್ಥೆಯ ಕಾನ್ಫರೆನ್ಸ್‌ ಆಫ್‌ ಪಾರ್ಟೀಸ್‌(ಸಿಒಪಿ-28) ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಯುಎಇ ಉಪ ಪ್ರಧಾನಿ ಶೇಖ್ ಸೈಫ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೋದಿ ಅವರನ್ನು ದುಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.    

ದುಬೈ ಭೇಟಿ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, 'ಸಿಒಪಿ–28 ಶೃಂಗಸಭೆಯಲ್ಲಿ ಭಾಗವಹಿಸಲು ದುಬೈಗೆ ಬಂದಿಳಿದಿದ್ದೇನೆ. ಸಭೆಯ ಕಾರ್ಯಕಲಾಪಗಳನ್ನು ಎದುರು ನೋಡುತ್ತಿದ್ದೇನೆ' ಎಂದು ಪೋಸ್ಟ್ ಮಾಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಮಾತನಾಡಿ, 'ಪ್ರಧಾನಿ ಮೋದಿ ಜಾಗತಿಕ ನಾಯಕರೊಂದಿಗೆ ಸಭೆ ನಡೆಸುತ್ತಾರೆ ಮತ್ತು ಹವಾಮಾನ ಕ್ರಮವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ' ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ದುಬೈನಲ್ಲಿರುವ ಭಾರತೀಯ ಸಮುದಾಯದ ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. 'ಅವರ ಸ್ವಾಗತದಿಂದ ನಾನು ತೀವ್ರ ಭಾವುಕನಾಗಿದ್ದೇನೆ. ಅವರ ಬೆಂಬಲ ಮತ್ತು ಉತ್ಸಾಹ ನಮ್ಮ ಸಂಸ್ಕೃತಿ ಮತ್ತು ಬಂಧಗಳಿಗೆ ಸಾಕ್ಷಿಯಾಗಿದೆ' ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯುಎಇ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಸಿಒಪಿ–28ನೇ ಶೃಂಗ ಸಭೆ ನಡೆಸುತ್ತಿದೆ. ಈ ವೇಳೆ ಪ್ರಧಾನಿ ಮೂರು ಉನ್ನತ ಮಟ್ಟದ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ಶೃಂಗ ಸಭೆ ನ.30ರಿಂದ ಡಿ.12ರವರೆಗೆ ನಡೆಯಲಿದೆ.

ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ ಸಿಒಪಿ 28ರ ಉನ್ನತ ಮಟ್ಟದ ವಿಭಾಗವಾಗಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಕುರಿತು ಚರ್ಚಿಸಲು ಹಲವಾರು ವಿಶ್ವ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com