ರಾಜ್ಯಪಾಲ ದಾರ್ ಹರಿ ಬಾಬು - v
ದೇಶ
ಮಿಜೋರಾಂ ಸಿಎಂ ಸ್ಥಾನಕ್ಕೆ ಜೋರಾಮ್ತಂಗಾ ರಾಜೀನಾಮೆ
ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಆಡಳಿತರೂಢ ಎಂಎನ್‌ಎಫ್ ಸೋಲು ಅನುಭವಿಸಿದೆ. ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM) ಪಕ್ಷ ಅಧಿಕಾರ ಪಡೆಯುವುದು ಬಹುತೇಕ...
ಐಜ್ವಾಲ್: ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಆಡಳಿತರೂಢ ಎಂಎನ್‌ಎಫ್ ಸೋಲು ಅನುಭವಿಸಿದೆ. ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM) ಪಕ್ಷ ಅಧಿಕಾರ ಪಡೆಯುವುದು ಬಹುತೇಕ ಖಚಿತವಾಗಿದೆ.
ಮಿಜೋರಾಂ ಮುಖ್ಯಮಂತ್ರಿ ಜೋರಾಮ್ತಂಗಾ ಅವರು ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ದಾರ್ ಹರಿ ಬಾಬು ಕಂಬಂಪತಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸ್ವೀಕರಿಸಿದ ರಾಜ್ಯಪಾಲರು, ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಜೋರಾಮ್ತಂಗಾ ಅವರಿಗೆ ಕೇಳಿಕೊಂಡಿದ್ದಾರೆ.
ಹಾಲಿ ಮುಖ್ಯಮಂತ್ರಿ ಜೋರಾಮ್ತಂಗಾ ಅವರು, ಐಜ್ವಾಲ್ ಪೂರ್ವ-1 ಕ್ಷೇತ್ರದಲ್ಲಿ ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM) ನಾಯಕ ಲಾಲ್ತನ್ಸಂಗ ವಿರುದ್ಧ 2,101 ಮತಗಳಿಂದ ಸೋಲು ಕಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ