ಮಧ್ಯಪ್ರದೇಶ ಸಿಎಂ ಆಯ್ಕೆ ಬಿಕ್ಕಟ್ಟು: ಸೋಮವಾರ ಬಗೆಹರಿಯುವ ಸಾಧ್ಯತೆ

ಇತ್ತೀಚಿಗೆ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಫಲಿತಾಂಶ ಬಂದು 9 ದಿನಗಳಾದರೂ ಇನ್ನೂ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಬಗೆಹರಿದಿಲ್ಲ.
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಇತ್ತೀಚಿಗೆ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಫಲಿತಾಂಶ ಬಂದು 9 ದಿನಗಳಾದರೂ ಇನ್ನೂ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಬಗೆಹರಿದಿಲ್ಲ.

ಸೋಮವಾರ ಕೇಂದ್ರ ವೀಕ್ಷಕರ ಸಮ್ಮುಖದಲ್ಲಿ ಸಭೆ ನಡೆಯಲಿದ್ದು, ಬಿಜೆಪಿಯ 163 ಹೊಸದಾಗಿ ಚುನಾಯಿತ ಶಾಸಕರು ತಮ್ಮ ನಾಯಕನನ್ನು ಆಯ್ಕೆ ಮಾಡುವ ಮೂಲಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸಸ್ಪೆನ್ಸ್  ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್
  
ನವೆಂಬರ್ 17 ರಂದು ನಡೆದ ಚುನಾವಣೆಯ ಫಲಿತಾಂಶ ಕಳೆದ ಭಾನುವಾರ ಪ್ರಕಟವಾಗಿತ್ತು. 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿತು, ಕಾಂಗ್ರೆಸ್ 66 ರಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಮಧ್ಯಪ್ರದೇಶದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಒಬಿಸಿ 'ಮೋರ್ಚಾ' ಮುಖ್ಯಸ್ಥ ಕೆ ಲಕ್ಷ್ಮಣ್ ಮತ್ತು ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಶುಕ್ರವಾರ ಪಕ್ಷ ನೇಮಿಸಿದೆ. 

"ಕೇಂದ್ರ ವೀಕ್ಷಕರು ಸೋಮವಾರ ಪಕ್ಷದ ಶಾಸಕಾಂಗ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ" ಎಂದು ಮಧ್ಯಪ್ರದೇಶ ಬಿಜೆಪಿ ಮಾಧ್ಯಮ ಘಟಕ ಮುಖ್ಯಸ್ಥ ಆಶಿಶ್ ಅಗರವಾಲ್ ಶನಿವಾರ ಪಿಟಿಐಗೆ ತಿಳಿಸಿದರು. ಸೋಮವಾರ ಸಂಜೆ 5 ರಿಂದ 7 ಗಂಟೆಯವರೆಗೆ ಸಭೆ ಆರಂಭವಾಗುವ ಸಾಧ್ಯತೆ ಇದೆ.

ಈ ಮೊದಲು ಸಭೆಯನ್ನು ಭಾನುವಾರ ನಡೆಸಲು ನಿರ್ಧರಿಸಲಾಗಿತ್ತು. ಆದರೆ ವೀಕ್ಷಕರ ಕಾರ್ಯನಿರತ ವೇಳಾಪಟ್ಟಿಯಿಂದಾಗಿ ಅದನ್ನು ಸೋಮವಾರದವರೆಗೆ ಮುಂದೂಡಲಾಗಿದೆ ಎಂದು ಅವರು ಹೇಳಿದರು. ವೀಕ್ಷಕರು ಭಾನುವಾರ ಸಂಜೆ ಅಥವಾ ಸೋಮವಾರ ಬೆಳಗ್ಗೆ ಮಧ್ಯಪ್ರದೇಶಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ, ಕಳೆದ 19 ವರ್ಷಗಳಲ್ಲಿ ಮೂರನೇ ಬಾರಿಗೆ ಬಿಜೆಪಿ ಮಧ್ಯಪ್ರದೇಶಕ್ಕೆ ಕೇಂದ್ರ ವೀಕ್ಷಕರನ್ನು ಕಳುಹಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com