ಆಸ್ಪತ್ರೆಯ ಡಸ್ಟ್ ಬಿನ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ!

ವಾಣಿಜ್ಯ ನಗರಿ ಮುಂಬೈನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿನ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿನ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

ಸಿಯಾನ್ ಆಸ್ಪತ್ರೆ ಎಂದೇ ಜನಪ್ರಿಯವಾಗಿರುವ ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ಪತ್ರೆಯ ವಾಶ್ ರೂಂ ನ  ಡಸ್ಟ್‌ಬಿನ್‌ನಲ್ಲಿ ನವಜಾತ ಶಿಶುವಿನ ಶವವೊಂದನ್ನು ಕಸ ಗುಡಿಸುವವರೊಬ್ಬರು  ಪತ್ತೆ ಮಾಡಿದ್ದಾರೆ. ನಂತರ ಅದರ ಬಗ್ಗೆ ಕರ್ತವ್ಯ ನಿರತ ವೈದ್ಯರಿಗೆ ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. 

ವೈದ್ಯರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಅಪರಿಚಿತ ಮಹಿಳೆಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 317ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಯಾನ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com