ಹೈದರಾಬಾದ್: ಆಸ್ಪತ್ರೆಯಲ್ಲಿ ಮಾಜಿ ಸಿಎಂ ಕೆಸಿಆರ್ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ- ವಿಡಿಯೋ

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಹಾಲಿ ಸಿಎಂ ರೇವಂತ್ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಕೆಸಿಆರ್ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ
ಕೆಸಿಆರ್ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್: ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಹಾಲಿ ಸಿಎಂ ರೇವಂತ್ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಡಿಸೆಂಬರ್ 7 ರಂದು ಎರ್ರವಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಬಿದ್ದು ನಂತರ ಅವರಿಗೆ ತೊಡೆ  ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಚೇತರಿಸಿಕೊಳ್ಳಲು ಆರರಿಂದ ಎಂಟು ವಾರಗಳು ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. 

ಇತ್ತೀಚಿಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಹಿಡಿದಿದೆ. ಬಿಆರ್ ಎಸ್ 39 ಸ್ಥಾನಗಳಲ್ಲಿ ಗೆದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com