ಛತ್ತೀಸ್‌ಗಢ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಷ್ಣು ದೇವ್ ಸಾಯಿ

ಛತ್ತೀಸ್ ಗಢ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಅವರು ಭಾನುವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ರಾಜ್ಯಪಾಲರನ್ನು ಭೇಟಿ ಮಾಡಿದ ವಿಷ್ಣು ದೇವ್ ಸಾಯಿ
ರಾಜ್ಯಪಾಲರನ್ನು ಭೇಟಿ ಮಾಡಿದ ವಿಷ್ಣು ದೇವ್ ಸಾಯಿ

ರಾಯ್‌ಪುರ: ಛತ್ತೀಸ್ ಗಢ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಅವರು ಭಾನುವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಇಂದು ಬಿಜೆಪಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಕಾಂಗ ಪಕ್ಷದ ಸಭೆಯಲ್ಲಿ ವಿಷ್ಣುದೇವ್ ಸಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.

ಬಳಿಕ ನಿಯೋಜಿತ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಇಂದು ಸಂಜೆ ರಾಯ್‌ಪುರದ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿಶ್ವಭೂಷಣ ಹರಿಚಂದನ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಬ್ರಿಜ್‌ಮೋಹನ್ ಅಗರವಾಲ್ ಅವರು, ಸಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿರುವ ಪತ್ರವನ್ನು ನಾವು ರಾಜ್ಯಪಾಲರಿಗೆ ನೀಡಿದ್ದೇವೆ ಎಂದರು. ಆದರೆ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅಗರವಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com