ಮಧ್ಯಪ್ರದೇಶ ರಾಜ್ಯಪಾಲರನ್ನು ಭೇಟಿ ಮಾಡಿದ ಮೋಹನ್ ಯಾದವ್; ಸರ್ಕಾರ ರಚನೆಗೆ ಹಕ್ಕು ಮಂಡನೆ

ಮಧ್ಯಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸೋಮವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ರಾಜ್ಯಪಾಲರನ್ನು ಭೇಟಿ ಮಾಡಿದ ಮೋಹನ್ ಯಾದವ್
ರಾಜ್ಯಪಾಲರನ್ನು ಭೇಟಿ ಮಾಡಿದ ಮೋಹನ್ ಯಾದವ್

ಭೋಪಾಲ್: ಮಧ್ಯಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸೋಮವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಉಜ್ಜಯಿನಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. 

ಇದಕ್ಕೂ ಮುನ್ನ ಮಧ್ಯ ಪ್ರದೇಶ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದರು.

ಏತನ್ಮಧ್ಯೆ, ರಾಜ್ಯದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿದ್ದು, ಜಗದೀಶ್‌ಗ್ ದೇವಡಾ ಮತ್ತು ರಾಜೇಶ್ ಶುಕ್ಲಾ ಡಿಸಿಎಂ ಆಗಿ ಆಯ್ಕೆ ಮಾಡಲಾಗಿದೆ.

2013 ರಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಯಾದವ್  ಅವರು ಜುಲೈ 2, 2020 ರಂದು ಅವರು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com