ಇಂದೋರ್: ಸೆಕ್ಸ್ ನಿರಾಕರಿಸಿದ್ದಕ್ಕೆ ಲಿವ್-ಇನ್ ಪಾರ್ಟನರ್ ಹತ್ಯೆ ಮಾಡಿದ ಯುವಕ

ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ನಿರಾಕರಿಸಿದ 20 ವರ್ಷದ ಯುವತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆಕೆಯ ಲಿವ್-ಇನ್ ಪಾರ್ಟನರ್ ನನ್ನು ಇಂದೋರ್‌ನಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಇಂದೋರ್: ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ನಿರಾಕರಿಸಿದ 20 ವರ್ಷದ ಯುವತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆಕೆಯ ಲಿವ್-ಇನ್ ಪಾರ್ಟನರ್ ನನ್ನು ಇಂದೋರ್‌ನಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಯುವತಿ ಮತ್ತು ಆರೋಪಿ ಯುವಕ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿದ ನಂತರ ಕಳೆದ ಕೆಲವು ದಿನಗಳಿಂದ ನಗರದ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾವ್ಜಿ ಬಜಾರ್ ಪ್ರದೇಶದಲ್ಲಿ ಈ ಜೋಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ಡಿಸೆಂಬರ್ 7 ರಂದು ಯುವತಿಯನ್ನು ಹತ್ಯೆ ಮಾಡಲಾಗಿದ್ದು, ಎರಡು ದಿನಗಳ ನಂತರ ಡಿಸೆಂಬರ್ 9 ರಂದು ಪೊಲೀಸರು ಆಕೆಯ ದೇಹವನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಭಿನಯ್ ವಿಶ್ವಕರ್ಮ ಸುದ್ದಿಗಾರರಿಗೆ ತಿಳಿಸಿದರು.

ಆರೋಪಿ ಪ್ರವೀಣ್ ಸಿಂಗ್ ಧಾಕಡ್(24) ಮೂಲತಃ ಗುಣಾ ಜಿಲ್ಲೆಯ ನಿವಾಸಿಯಾಗಿದ್ದು, ತನ್ನೊಂದಿಗೆ ವಾಸಿಸುತ್ತಿದ್ದ ಯುವತಿ ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಕೋಪಗೊಂಡು ಅವಳ ಕುತ್ತಿಗೆಗೆ ಕತ್ತರಿಯಿಂದ ಇರಿದಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.

ಮಹಿಳೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ವಿಶ್ವಕರ್ಮ ಅವರು ತಿಳಿಸಿದ್ದಾರೆ.

ಘಟನೆ ನಂತರ ಗಾಬರಿಗೊಂಡ ಆರೋಪಿ ಮನೆಗೆ ಹೊರಗಿನಿಂದ ಬೀಗ ಹಾಕಿ ಪರಾರಿಯಾಗಿದ್ದಾನೆ ಮತ್ತು ಆಕೆಯ ಮೊಬೈಲ್ ಫೋನ್ ಅನ್ನು ಸಹ ತೆಗೆದುಕೊಂಡು ಹೋಗಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕೊಲೆ ಬೆಳಕಿಗೆ ಬಂದ ನಂತರ ಧಾಕಡ್ ನನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com