ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ, ಎಸ್ ಜೈಶಂಕರ್ ನೆರವು ಕೋರಿದ ಬಿಜೆಪಿ ನಾಯಕ

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆಯಾಗಿದ್ದು, ನೆರವು ನೀಡುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ನೆರವು ನೀಡುವಂತೆ ಕೋರಲಾಗಿದೆ.
ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ
ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ

ಲಂಡನ್: ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆಯಾಗಿದ್ದು, ನೆರವು ನೀಡುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ನೆರವು ನೀಡುವಂತೆ ಕೋರಲಾಗಿದೆ.

ಯುನೈಟೆಡ್ ಕಿಂಗ್ಡಂನ ಲೌಬರೋ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಜಿಎಸ್ ಭಾಟಿಯಾ ಎಂಬ ಭಾರತೀಯ ವಿದ್ಯಾರ್ಥಿ ಡಿಸೆಂಬರ್ 15 ರಿಂದ ಪೂರ್ವ ಲಂಡನ್‌ನಿಂದ ನಾಪತ್ತೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟ್ವಿಟರ್ ನಲ್ಲಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಮತ್ತು ಇದನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಗಮನಕ್ಕೆ ತಂದಿದ್ದಾರೆ.

ಮಂಜಿಂದರ್ ಸಿರ್ಸಾ ಪ್ರಕಾರ, ಜಿಎಸ್ ಭಾಟಿಯಾ ಕೊನೆಯದಾಗಿ ಡಿಸೆಂಬರ್ 15 ರಂದು ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್‌ನಲ್ಲಿ ಕಾಣಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಅವರನ್ನು ಹುಡುಕುವ ಪ್ರಯತ್ನದಲ್ಲಿ ಲೌಬರೋ ವಿಶ್ವವಿದ್ಯಾಲಯ ಮತ್ತು ಭಾರತೀಯ ಹೈಕಮಿಷನ್ ಸೇರಬೇಕೆಂದು ಅವರು ಒತ್ತಾಯಿಸಿದರು.

ಅಂತೆಯೇ ಬಿಜೆಪಿ ನಾಯಕರು ಸುದ್ದಿಯನ್ನು ಹಂಚಿಕೊಳ್ಳಲು ಜನರಿಗೆ ಮನವಿ ಮಾಡಿದ್ದು, ನಾಪತ್ತೆಯಾಗಿರುವ ಭಾರತೀಯ ವಿದ್ಯಾರ್ಥಿಯ ಬಗ್ಗೆ ಯಾವುದೇ ಮಾಹಿತಿಯನ್ನು ಒದಗಿಸಲು ಎರಡು ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಂಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com