ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೇ?: ಧನಕರ್‌ ಗೆ ಖರ್ಗೆ ಪ್ರಶ್ನೆ

ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯಸಭಾ ಅಧ್ಯಕ್ಷರೂ ಆಗಿರುವ ಧನಕರ್ ಅವರು, ತಾನು ರೈತ ಮತ್ತು 'ಜಾಟ್' (ಅವರ ಜಾತಿ) ಎಂಬ ಕಾರಣಕ್ಕೆ ತಮ್ಮ ಬಗ್ಗೆ ಮಿಮಿಕ್ರಿ ಮಾಡಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದರು. ಆಡಳಿತಾರೂಢ ಬಿಜೆಪಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಇತರ ಸದಸ್ಯರಿಗೆ ರಕ್ಷಣೆ ನೀಡುವುದು ಸಭಾಪತಿಯವರ ಕೆಲಸ. ಆದರೆ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

"ರಾಜ್ಯಸಭೆಯಲ್ಲಿ ಆಗಾಗ ಮಾತನಾಡಲು ನನಗೆ ಅವಕಾಶ ನೀಡುವುದಿಲ್ಲ. ಆದರೆ ನಾನು ದಲಿತ ಎಂಬ ಕಾರಣಕ್ಕೆ ಹೀಗೆ ಮಾಡುತ್ತಾರೆ ಎಂದು ಹೇಳಬೇಕೇ?" ಎಂದು ಪ್ರಶ್ನಿಸಿದರು. ಸದನದ ಒಳಗೆ ಜಾತಿಯ ಬಗ್ಗೆ ಮಾತನಾಡುವ ಮೂಲಕ ಹೊರಗಿನವರನ್ನು ಪ್ರಚೋದಿಸಬಾರದು ಎಂದಿದ್ದಾರೆ.

ಸಾಂವಿಧಾನಿಕ ಉನ್ನತ ಸ್ಥಾನದಲ್ಲಿರುವವರು ತಮ್ಮ ಜಾತಿಯ ಬಗ್ಗೆ ಮಾತನಾಡುತ್ತಿರುವುದು ಅತ್ಯಂತ ದುಃಖಕರ ವಿಚಾರ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com