ಪಿಕ್ ಪಾಕೆಟ್ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ಸಾರ್ವಜನಿಕ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ 'ಪಿಕ್‌ಪಾಕೆಟ್' ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಂಟು ವಾರಗಳಲ್ಲಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಸಾರ್ವಜನಿಕ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ 'ಪಿಕ್‌ಪಾಕೆಟ್' ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಂಟು ವಾರಗಳಲ್ಲಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಈಗಾಗಲೇ ದೇಶಾದ್ಯಂತ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್‌ನ ಈ ಆದೇಶ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ರಾಹುಲ್ ಗಾಂಧಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮತ್ತು ರಾಜಕಾರಣಿಗಳ ಕೀಳುಮಟ್ಟದ ಹೇಳಿಕೆಗಳನ್ನು ತಡೆಯಲು ಮಾರ್ಗಸೂಚಿ ರೂಪಿಸುವಂತೆ ಕೋರಿ ವಕೀಲ ಭರತ್‌ ನಗರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ರಾಹುಲ್ ಗಾಂಧಿ ವಿರುದ್ಧ 8 ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ನವೆಂಬರ್ 22 ರಂದು ರಾಹುಲ್ ಗಾಂಧಿ ಅವರು, ಪ್ರಧಾನಿ ಸೇರಿದಂತೆ "ಉನ್ನತ ಸರ್ಕಾರಿ ಹುದ್ದೆಗಳನ್ನು" ಹೊಂದಿರುವ ವ್ಯಕ್ತಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ ಮತ್ತು ಅವರನ್ನು "ಪಿಕ್-ಪಾಕೆಟ್" ಎಂದು ಕರೆದಿರುವುದಾಗಿ ಆರೋಪಿಸಿ ವಕೀಲ ನಗರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

"ಈ ರೀತಿಯ ಆರೋಪಗಳು ಸ್ವೀಕಾರಾರ್ಹವಲ್ಲ ಮತ್ತು ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ" ಎಂದು ಕೋರಿದ್ದರು.

ಚುನಾವಣಾ ಆಯೋಗ ಈ ಸಂಬಂಧ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಕೂಡ ನೀಡಿದೆ. ಆದರೆ ನೋಟಿಸ್ ಕಾಂಗ್ರೆಸ್ ನಾಯಕ ಉತ್ತರ ನೀಡಿಲ್ಲ ಮತ್ತು ಪ್ರತ್ಯುತ್ತರ ಸಲ್ಲಿಸುವ ಗಡುವು ಮುಗಿದಿದೆ. ಹೀಗಾಗಿ ಸಾಧ್ಯವಾದಷ್ಟು ಬೇಗ ಈ ಕುರಿತು ನಿರ್ಧರಿಸುವಂತೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ನಿರ್ದೇಶಿಸುತ್ತದೆ" ಎಂದು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರನ್ನೊಳಗೊಂಡ ಪೀಠ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com