ರೀಲ್ಸ್ ಮಾಡೋ ಗೀಳು: ರೀಲ್ಸ್ ಮಾಡುವಾಗ ರೈಲಿಗೆ ಸಿಲುಕಿ ಮೂವರು ಯುವಕರು ಸಾವು, ನದಿಗೆ ಹಾರಿ ಇಬ್ಬರು ಬಚಾವ್!

ಸೋಷಿಯಲ್ ಮೀಡಿಯಾಕ್ಕಾಗಿ ರೀಲ್ಸ್ ಮಾಡುವಾಗ ಯುವಕರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು ಮತ್ತಿಬ್ಬರು ನದಿಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುರ್ಷಿದಾಬಾದ್(ಪಶ್ಚಿಮ ಬಂಗಾಳ): ಸೋಷಿಯಲ್ ಮೀಡಿಯಾಕ್ಕಾಗಿ ರೀಲ್ಸ್ ಮಾಡುವಾಗ ಯುವಕರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು ಮತ್ತಿಬ್ಬರು ನದಿಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. 

ಪಶ್ಚಿಮ ಬಂಗಾಳದ ಮಾಲ್ಡಾದ ಸ್ಥಳೀಯ ರೈಲ್ವೇ ನಿಲ್ದಾಣಗಳ ನಡುವೆ ಈ ಘಟನೆ ನಡೆದಿರುವುದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೈಲ್ವೆ ಸೇತುವೆಯ ಮೇಲೆ ರೀಲ್ಸ್ ಮಾಡುತ್ತಿದ್ದಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಬುಧವಾರ ಈ ಮಾಹಿತಿ ನೀಡಿದ ಅಧಿಕಾರಿಯೊಬ್ಬರು, ಮೃತರ ಸ್ನೇಹಿತರಿಬ್ಬರು ಕೊನೆಯ ಕ್ಷಣದಲ್ಲಿ ನದಿಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.

ಮಾಲ್ಡಾ ವಿಭಾಗದ ಅಜಿಮ್‌ಗಂಜ್-ನ್ಯೂ ಫರಕ್ಕಾ ವಿಭಾಗದ ಸುಜ್ನಿಪಾರಾ ಮತ್ತು ಅಹಿರೋನ್ ನಿಲ್ದಾಣಗಳ ನಡುವಿನ ರೈಲ್ವೆ ಸೇತುವೆಯ ಮೇಲೆ ಹಳಿಗಳ ಮೇಲೆ ನಿಂತು ರೀಲ್ಸ್ ಮಾಡುತ್ತಿದ್ದಾಗ 13053 ಹೌರಾ-ರಾಧಿಕಪೂರ್ ಕುಲಿಕ್ ಎಕ್ಸ್‌ಪ್ರೆಸ್‌ ರೈಲು ಮೂವರು ಯುವಕರು ಡಿಕ್ಕಿ ಹೊಡೆದಿದೆ ಎಂದು ಇಆರ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com