ಮಾನನಷ್ಟ ಮೊಕದ್ದಮೆ: ಅಶೋಕ್ ಗೆಹ್ಲೋಟ್ ಅರ್ಜಿಗೆ ಉತ್ತರಿಸುವಂತೆ ಸಚಿವ ಶೇಖಾವತ್‌ಗೆ ದೆಹಲಿ ಹೈಕೋರ್ಟ್ ಸೂಚನೆ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಉತ್ತರ ನೀಡುವಂತೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.
ಗಜೇಂದ್ರ ಸಿಂಗ್ ಶೆಖಾವತ್-ಅಶೋಕ್ ಗೆಹ್ಲೋಟ್
ಗಜೇಂದ್ರ ಸಿಂಗ್ ಶೆಖಾವತ್-ಅಶೋಕ್ ಗೆಹ್ಲೋಟ್
Updated on

ನವದೆಹಲಿ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಉತ್ತರ ನೀಡುವಂತೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ರಾಜಸ್ಥಾನದ ಮಾಜಿ ಸಿಎಂ ಶಶೋಕ್ ಗೆಹ್ಲೋಟ್ ಅವರ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ನೋಟಿಸ್ ಕಳುಹಿಸಿದೆ. ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಗೆಹ್ಲೋಟ್ ಸಲ್ಲಿಸಿರುವ ಅರ್ಜಿಗೆ ನೋಟಿಸ್ ಕಳುಹಿಸಲಾಗಿದೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಮಾನಹಾನಿ ಪ್ರಕರಣ ಇದಾಗಿದೆ. ಜನವರಿ 22ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್‌ ಕೋರಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. 

ವಿಚಾರಣಾ ನ್ಯಾಯಾಲಯವು CRCP 91 ಮತ್ತು 251ರ ಅಡಿಯಲ್ಲಿ ಅಶೋಕ್ ಗೆಹ್ಲೋಟ್ ಅವರ ಅರ್ಜಿಯ ಮೇಲೆ ಯಾವುದೇ ಆದೇಶವನ್ನು ತೆಗೆದುಕೊಳ್ಳಬಾರದು. ಡಿಸೆಂಬರ್ 22ರಂದು ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕಿತ್ತು. ನ್ಯಾಯಮೂರ್ತಿ ಸ್ವರ್ಣ್ ಕಾಂತ ಶರ್ಮಾ ಅವರಿದ್ದ ಏಕ ಪೀಠದಲ್ಲಿ ವಿಚಾರಣೆ ನಡೆಯಿತು. ಗೆಹ್ಲೋಟ್ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ವಿಚಾರಣಾ ನ್ಯಾಯಾಲಯದ ಸಮನ್ಸ್ ಅನ್ನು ಸೆಷನ್ಸ್ ಕೋರ್ಟ್ ಎತ್ತಿ ಹಿಡಿದಿತ್ತು.

ಈ ಹಿಂದೆ ಡಿಸೆಂಬರ್ 13 ರಂದು ಶೇಖಾವತ್ ಅವರಿಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ದೊಡ್ಡ ಹಿನ್ನಡೆಯಾಗಿತ್ತು. ದೆಹಲಿಯ ರೂಸ್ ಅವೆನ್ಯೂ ಸೆಷನ್ಸ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಗೆಹ್ಲೋಟ್ ವಿರುದ್ಧದ ವಿಚಾರಣೆಯನ್ನು ಅನುಮೋದಿಸಿತ್ತು. ಗೆಹ್ಲೋಟ್ ಅವರು ಮಾನನಷ್ಟ ಮೊಕದ್ದಮೆಯಲ್ಲಿ ವಿಚಾರಣಾ ನ್ಯಾಯಾಲಯ ನೀಡಿದ್ದ ಸಮನ್ಸ್‌ಗಳನ್ನು ಪ್ರಶ್ನಿಸಿದ್ದರು. ಗೆಹ್ಲೋಟ್ ಸಲ್ಲಿಸಿದ್ದ ಪರಿಷ್ಕರಣೆ ಅರ್ಜಿಯನ್ನು ನ್ಯಾಯಾಲಯ ಸಾರಾಸಗಟಾಗಿ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಂ.ಕೆ ನಾಗ್ಪಾಲ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಗೆಹ್ಲೋಟ್ ಸಲ್ಲಿಸಿದ್ದ ಅರ್ಜಿಯಲ್ಲಿ ವಿಚಾರಣಾ ನ್ಯಾಯಾಲಯದ ಸಮನ್ಸ್ ಆದೇಶವನ್ನು ಪ್ರಶ್ನಿಸಲಾಗಿದೆ. ವಿಚಾರಣೆಯ ನಂತರ, ತನ್ನ 64 ಪುಟಗಳ ಆದೇಶದಲ್ಲಿ, ಸೆಷನ್ಸ್ ನ್ಯಾಯಾಲಯವು ಸಮನ್ಸ್ ಆದೇಶವನ್ನು ಎತ್ತಿಹಿಡಿದಿದೆ.

ಅಂದರೆ ಅಶೋಕ್ ಗೆಹ್ಲೋಟ್ ಈಗ ಮಾನನಷ್ಟ ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ. ಗೆಹ್ಲೋಟ್ ಅವರ ಮೇಲ್ವಿಚಾರಣಾ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಶೇಖಾವತ್ ಪರ ವಕೀಲ ಆದಿತ್ಯ ವಿಕ್ರಮ್ ಸಿಂಗ್ ಅವರು, ಜುಲೈ 6 ರಂದು ಗೆಹ್ಲೋಟ್‌ಗೆ ನ್ಯಾಯಾಲಯವು ಹೊರಡಿಸಿದ ಸಮನ್ಸ್‌ಗಳು ಈ ಸಂಪೂರ್ಣ ಪ್ರಕರಣದಲ್ಲಿ ಗೆಹ್ಲೋಟ್ ಪ್ರಾಥಮಿಕವಾಗಿ ತಪ್ಪಿತಸ್ಥರು ಎಂದು ಸ್ಪಷ್ಟಪಡಿಸುತ್ತದೆ ಎಂದು ಹೇಳಿದರು. ವಿಚಾರಣೆಯ ನಂತರ ಅವರು ತಪ್ಪಿತಸ್ಥರೆಂದು ಸಾಬೀತಾದರೆ, ಅವರು ಜೈಲು ಶಿಕ್ಷೆಗೆ ಗುರಿಯಾಗಬಹುದು.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಂಜೀವನಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪದೇ ಪದೇ ಆರೋಪಿಸಿದ್ದರು. ಈ ವರ್ಷ ಜೋಧ್‌ಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ, ಸಂಜೀವನಿ ಹಗರಣದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅವರ ಕುಟುಂಬವೂ ಭಾಗಿಯಾಗಿದೆ ಎಂದು ಸಿಎಂ ಗೆಹ್ಲೋಟ್ ಆರೋಪಿಸಿದ್ದರು. ಅವರ ಹೇಳಿಕೆಯ ನಂತರ, ಶೇಖಾವತ್ ಅವರು ಈ ವರ್ಷ ಮಾರ್ಚ್ 3 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com