ಜಮ್ಮು-ಕಾಶ್ಮೀರ: ಸಾಂಬಾದಲ್ಲಿ ಮಾರ್ಟರ್ ಶೆಲ್ ಸ್ಫೋಟ, ಓರ್ವ ಸಾವು

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಚಾಂಡ್ಲಿ ಗ್ರಾಮದಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವನಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಸಾಂಬಾ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಚಾಂಡ್ಲಿ ಗ್ರಾಮದಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವನಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ವ್ಯಕ್ತಿಗೆ ಗಂಭೀರವಾದ ಗಾಯವಾಗಿದೆ ಎಂದು ಸಾಂಬಾ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪೂಂಚ್ ನಲ್ಲಿ ಭಯೋತ್ಪಾದಕರ ದಾಳಿ: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೂವರ ಶವ ಪತ್ತೆ

"ಚಂದಲಿ ಗ್ರಾಮದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಮೋರ್ಟರ್ ಶೆಲ್ ಸ್ಫೋಟಗೊಂಡಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಇದೀಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com