ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ವಿಚಾರಣೆಗೆ ಹಾಜರಾದ ಕಾರ್ತಿ ಚಿದಂಬರಂ

2011ರಲ್ಲಿ ಕೆಲವು ಚೀನಾ ಪ್ರಜೆಗಳಿಗೆ ವೀಸಾ ನೀಡಿದ್ದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಶನಿವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: 2011ರಲ್ಲಿ ಕೆಲವು ಚೀನಾ ಪ್ರಜೆಗಳಿಗೆ ವೀಸಾ ನೀಡಿದ್ದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಶನಿವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವೇದಾಂತ ಗ್ರೂಪ್ ಕಂಪನಿ ತಲ್ವಂಡಿ ಸಾಬೋ ಪವರ್ ಲಿಮಿಟೆಡ್‌ನ ಉನ್ನತ ಅಧಿಕಾರಿಯೊಬ್ಬರು ಕಾರ್ತಿ ಮತ್ತು ಅವರ ನಿಕಟವರ್ತಿ ಎಸ್ ಭಾಸ್ಕರರಾಮನ್‌ಗೆ ಕಿಕ್‌ಬ್ಯಾಕ್ ಆಗಿ 50 ಲಕ್ಷ ರೂ. ಪಾವತಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಟಿಎಸ್ ಪಿಎಲ್ ಪಂಜಾಬ್‌ನಲ್ಲಿ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುತ್ತಿದೆ ಎಂದು ಕೇಂದ್ರೀಯ ತನಿಖಾ ದಳ ದಾಖಲಿಸುವ ಎಫ್ ಐಆರ್ ನಲ್ಲಿ ಉಲ್ಲೇಖಿಸಿದೆ. 

ಸಿಬಿಐ ದೂರಿನಿಂದ ಇಡಿ ಕೇಸ್ ದಾಖಲಿಸಿತ್ತು.  ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ 52 ವರ್ಷದ ಸಂಸದ ಕಾರ್ತಿ ಅವರ ಹೇಳಿಕೆಯನ್ನು ಸಂಸ್ಥೆಯು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿಕೊಳ್ಳಲಿದೆ. ಈ ಹಿಂದೆ ಏಜೆನ್ಸಿಗೆ ದಾಖಲೆಗಳನ್ನು ಸಲ್ಲಿಸಿರುವುದಾಗಿ ಕಾರ್ತಿ ಹೇಳಿದ್ದರು. ಡಿಸೆಂಬರ್ 12 ಮತ್ತು 16 ರಂದು ವಿಚಾರಣೆಗೆ ಗೈರಾಗಿದ್ದರಿಂದ ದಾಖಲೆ ಸಲ್ಲಿಸಲು ಹೆಚ್ಚಿನ ಸಮಾಯಾವಕಾಶವನ್ನು ಕೋರಿದ್ದರು. 

Related Stories

No stories found.

Advertisement

X
Kannada Prabha
www.kannadaprabha.com