ಪಾಟ್ನಾ: 2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ
ಸಲಹೆಯಿಂದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಪ್ರಯತ್ನದಲ್ಲಿ ವಿಪಕ್ಷಗಳನ್ನು ಒಂದೇ ವೇದಿಕೆಗೆ ತರಲುವಲ್ಲಿ ನಿತೀಶ್ ಕುಮಾರ್ ಮುಂಚೂಣಿಯಲ್ಲಿದ್ದಾರೆ. ಆದರೆ ಇತ್ತೀಚಿಗೆ ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ನಾಲ್ಕನೇ ಸಭೆಯಲ್ಲಿ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂದು ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದರು.
ಇದರಿಂದಾಗಿ ಸಹಜವಾಗಿಯೇ ಬಿಹಾರ ಮುಖ್ಯಮಂತ್ರಿ ಅಸಮಾಧಾನಗೊಂಡಿದ್ದು, ಮೈತ್ರಿಕೂಟದಲ್ಲಿ ಮುಂದೆ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆಯಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗುತಿತ್ತು.
ಈ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ನಿತೀಶ್ ಕುಮಾರ್, ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಹೊಂದಲು ಬಯಸುವುದಿಲ್ಲ. ಆದರೆ ಎಲ್ಲಾ ರಾಜ್ಯದಲ್ಲೂ ಆದಷ್ಟು ಬೇಗ ಸೀಟು ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಬೇಕು ಎಂದು ಬಯಸುವುದಾಗಿ ಹೇಳಿದರು.
ನಾನು ಯಾವುದೇ ಹುದ್ದೆ ಬಯಸುವುದಿಲ್ಲ. ಬೇರೆ ಪಕ್ಷಗಳ ನಾಯಕರು ನನ್ನ ಬಗ್ಗೆ ಹೇಳಿಕೆ ನೀಡುತ್ತಾರೆ ಆದರೆ ನನಗೆ ಯಾವುದೇ ಹುದ್ದೆಯ ಆಸೆ ಇಲ್ಲ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಎಲ್ಲಾ ರಾಜ್ಯಗಳಲ್ಲಿ ಸೀಟು ಹಂಚಿಕೆ ಸೂತ್ರವನ್ನು ಆದಷ್ಟು ಬೇಗ ಅಂತಿಮಗೊಳಿಸಬೇಕು ಎಂದು ಬಯಸುತ್ತೇನೆ ಎಂದು ಮಾಧ್ಯಮ ಸಂವಾದದಲ್ಲಿ ಹೇಳಿದರು.
ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ ಸಕಾರಾತ್ಮಕವಾಗಿ ನಡೆದಿದೆ. ಲೋಕಸಭೆ ಚುನಾವಣೆಯನ್ನು ಸಾಮೂಹಿಕವಾಗಿ ಎದುರಿಸಲು ನಿರ್ಧರಿಸಿದ್ದೇವೆ ಎಂದು ನಿತೀಶ್ ಕುಮಾರ್ ತಿಳಿಸಿದರು.
Advertisement