ಕೋವಿಡ್ ರೂಪಾಂತರಿ ಜೆಎನ್.1: ಥಾಣೆಯಲ್ಲಿ 5 ಪ್ರಕರಣ ಪತ್ತೆ

ಮಹಾರಾಷ್ಟ್ರದ ಥಾಣೆಯಲ್ಲಿ ಕೊರೋನಾ ರೂಪಾಂತರಿ ತಳಿ ಜೆಎನ್.1 5 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಕೊರೋನಾ ರೂಪಾಂತರಿ ತಳಿ ಜೆಎನ್.1 5 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ನವೆಂಬರ್ 30ರಿಂದ ಪರೀಕ್ಷಿಸಲಾದ ಒಟ್ಟು 20 ಮಾದರಿಗಳಲ್ಲಿ 5 ಜೆ.ಎನ್‌.1 ರೂಪಾಂತರದ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತ ರೋಗಿಗಳಲ್ಲಿ ಓರ್ವ ಮಹಿಳೆ ಸೇರಿದ್ದಾರೆ. ಆದರೆ ಅವರಲ್ಲಿ ಯಾರೂ ಕೂಡ ಆಸ್ಪತ್ರೆಗೆ ದಾಖಲಾಗಿಲ್ಲ' ಎಂದು ಹೇಳಿದ್ದಾರೆ.

ಪ್ರಸ್ತುತ ನಗರದಲ್ಲಿ 28 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಇಬ್ಬರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರು ತಮ್ಮ ಮನೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com