ಅಮರಿಂದರ್ ಸಿಂಗ್ ಪತ್ನಿ, ಪಟಿಯಾಲಾ ಸಂಸದೆ ಪ್ರಣೀತ್ ಕೌರ್‌ರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಶುಕ್ರವಾರ ಕಾಂಗ್ರೆಸ್ ಶಿಸ್ತು ಸಮಿತಿಯು ಅಮರಿಂದರ್ ಸಿಂಗ್ ಅವರ ಪತ್ನಿ ಹಾಗೂ ಪಕ್ಷದ ಲೋಕಸಭಾ ಸಂಸದೆ ಪ್ರಣೀತ್ ಕೌರ್ ಅವರನ್ನು ಅಮಾನತುಗೊಳಿಸಿದೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ಏಕೆ ಉಚ್ಚಾಟಿಸಬಾರದು ಎಂಬ ಬಗ್ಗೆ ಮೂರು ದಿನಗಳಲ್ಲಿ ಉತ್ತರಿಸುವಂತೆ ಕೇಳಿದೆ.
ಅಮರಿಂದರ್ ಸಿಂಗ್ ಪತ್ನಿ ಮತ್ತು ಪಟಿಯಾಲದ ಸಂಸದೆ ಪ್ರಣೀತ್ ಕೌರ್
ಅಮರಿಂದರ್ ಸಿಂಗ್ ಪತ್ನಿ ಮತ್ತು ಪಟಿಯಾಲದ ಸಂಸದೆ ಪ್ರಣೀತ್ ಕೌರ್

ನವದೆಹಲಿ: ಶುಕ್ರವಾರ ಕಾಂಗ್ರೆಸ್ ಶಿಸ್ತು ಸಮಿತಿಯು ಅಮರಿಂದರ್ ಸಿಂಗ್ ಅವರ ಪತ್ನಿ ಹಾಗೂ ಪಕ್ಷದ ಲೋಕಸಭಾ ಸಂಸದೆ ಪ್ರಣೀತ್ ಕೌರ್ ಅವರನ್ನು ಅಮಾನತುಗೊಳಿಸಿದೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ಏಕೆ ಉಚ್ಚಾಟಿಸಬಾರದು ಎಂಬ ಬಗ್ಗೆ ಮೂರು ದಿನಗಳಲ್ಲಿ ಉತ್ತರಿಸುವಂತೆ ಕೇಳಿದೆ.

ಉತ್ತರದ ರಾಜ್ಯದಲ್ಲಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ರಾಜಾ ವಾರಿಂಗ್ ಮತ್ತು ಇತರ ರಾಜ್ಯ ನಾಯಕರು ಅವರ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ತಾರಿಕ್ ಅನ್ವರ್ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಪಕ್ಷದಿಂದ ಹೊರಹಾಕಲಾದ ಬಳಿಕ ಅವರು ಬಿಜೆಪಿ ಸೇರಿದ್ದರು. ಮಾಜಿ ಕೇಂದ್ರ ಸಚಿವೆ ಪ್ರಣೀತ್ ಕೌರ್ ಅವರು ಅಮರಿಂದರ್ ಸಿಂಗ್ ಅವರ ಪತ್ನಿಯಾಗಿದ್ದಾರೆ.

ಪ್ರಣೀತ್ ಕೌರ್ ಅವರು ಬಿಜೆಪಿಗೆ ಸಹಾಯ ಮಾಡಲು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ಸಲ್ಲಿಸಿದ್ದರು.

ಪಂಜಾಬ್‌ನ ಇತರ ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಕೂಡ ಈ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಗತ್ಯ ಕ್ರಮಕ್ಕಾಗಿ ದೂರನ್ನು ಎಐಸಿಸಿಯ ಶಿಸ್ತು ಕ್ರಮ ಸಮಿತಿಗೆ (ಡಿಎಸಿ) ಉಲ್ಲೇಖಿಸಲಾಗಿದೆ ಎಂದು ಅನ್ವರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಎಸಿ ಇದನ್ನು ಕೂಲಂಕಷವಾಗಿ ಪರಿಗಣಿಸಿದೆ ಮತ್ತು ಪಟಿಯಾಲದ ಲೋಕಸಭಾ ಸಂಸದೆ ಪ್ರಣೀತ್ ಕೌರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಬೇಕೆಂದು ನಿರ್ಧರಿಸಿತು. ಅವರನ್ನು ಪಕ್ಷದಿಂದ ಏಕೆ ಹೊರಹಾಕಬಾರದು ಎಂಬುದಕ್ಕೆ ಮೂರು ದಿನಗಳೊಳಗೆ ಕಾರಣವನ್ನು ತಿಳಿಸಲು ಅವರಿಗೆ ತಿಳಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅನ್ವರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com