
ರಾಮಜನ್ಮಭೂಮಿ ಪ್ರದೇಶ (ಸಂಗ್ರಹ ಚಿತ್ರ)
ಅಯೋಧ್ಯೆ: ಅನಾಮಿಕ ವ್ಯಕ್ತಿಯೋರ್ವ ಅಯೋಧ್ಯೆಯಲ್ಲಿರುವ ರಾಮ ಮಂದಿರ ಕಾಂಪ್ಲೆಕ್ಸ್ ನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ.
ಅಯೋಧ್ಯೆಯಲ್ಲಿನ ನಿವಾಸಿ ಮನೋಜ್ ಎಂಬಾತನಿಗೆ ಈ ಕರೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೋಜ್ ಉತ್ತರ ಪ್ರದೇಶದ ರಾಮ್ ಕೋಟ್ ನ ನಿವಾಸಿಯಾಗಿದ್ದಾರೆ. ತಮಗೆ ಬಂದ ಕರೆಯ ಬಗ್ಗೆ ವ್ಯಕ್ತಿ ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳ ಮಾಹಿತಿಯ ಪ್ರಕಾರ, ಗುರುವಾರ ಬೆಳಿಗ್ಗೆ 10 ಗಂಟೆಗೆ ಈ ಬೆದರಿಕೆ ಕರೆ ಬಂದಿದೆ. ಮಾಹಿತಿ ಪಡೆದ ತಕ್ಷಣವೇ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳಿಗೆ ಅಲರ್ಟ್ ನೀಡಿದರು.
ರಾಮ ಜನ್ಮಭೂಮಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ (ಎಸ್ ಹೆಚ್ಒ) ಸಂಜೀವ್ ಕುಮಾರ್ ಸಿಂಗ್ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕರೆ ಮಾಡಿದ್ದ ವ್ಯಕ್ತಿಯ ಪತ್ತೆ ಮಾಡುವ ಕಾರ್ಯಾಚರಣೆಯಲ್ಲಿ ಪೊಲೀಸರು ತೊಡಗಿದ್ದಾರೆ.