
ಯೋಗ ಗುರು ಬಾಬಾ ರಾಮದೇವ್
ಪಾಟ್ನಾ: ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಾಗಿದೆ.
ಬಿಹಾರ ಮೂಲದ ಹಕ್ಕುಗಳ ಕಾರ್ಯಕರ್ತ ತಮನ್ನಾ ಹಶ್ಮಿ ಎಂಬುವವರು ಯೋಗ ಗುರು ರಾಮ್‌ದೇವ್ ಅವರ ವಿರುದ್ಧ ದೂರು ದಾಖಲಿಸಿದ್ದು, ರಾಮ್ ದೇವ್ ಅವರು ತಮ್ಮ ಇತ್ತೀಚಿನ ಸಭೆಯಲ್ಲಿ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
इस शलवॉर क़मीज़ पहन के भागने वाले भगोड़े रामदेव को इस्लाम के बारे में पता ही क्या है जो ऐसी अप्शब्द बात करता है |
अगर तुम इस्लाम के बारे में सब कुछ जान लेते तो खुद ही इस्लाम धर्म अपना लेते ! pic.twitter.com/1jHBpbAEBn— Waris Pathan (@warispathan) February 3, 2023
ಬಿಹಾರದ ಸ್ಥಳೀಯ ನ್ಯಾಯಾಲಯದಲ್ಲಿ ಹಶ್ಮಿ ಅವರು ರಾಮದೇವ್ ವಿರುದ್ಧ ದೂರು ದಾಖಲಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಮುಸ್ಲಿಮರು ಮತ್ತು ಇಸ್ಲಾಂ ಧರ್ಮದ ವಿರುದ್ಧ ರಾಮ್‌ದೇವ್ ಅವರ ಹೇಳಿಕೆ ಆಕ್ಷೇಪಾರ್ಹವಾಗಿದೆ ಮತ್ತು ಇದು ಅವರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹಶ್ಮಿ ಮುಜಾಫರ್‌ಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್
ಶುಕ್ರವಾರ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ, ಯೋಗ ಗುರು ರಾಮ್ ದೇವ್ ಹಿಂದೂ ಧರ್ಮವನ್ನು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಹೋಲಿಕೆ ಮಾಡುವಾಗ, ಮುಸ್ಲಿಮರು ಭಯೋತ್ಪಾದನೆ ಮತ್ತು ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.