ಹಣ ವರ್ಗಾವಣೆ ಪ್ರಕರಣ: ಇಡಿಯಿಂದ ರಾಹುಲ್ ಗಾಂಧಿ ಆಪ್ತನ ವಿಚಾರಣೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ಅಲಂಕಾರ್ ಸವಾಯಿ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿ ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 04th February 2023 12:35 PM | Last Updated: 04th February 2023 05:22 PM | A+A A-

ರಾಹುಲ್ ಗಾಂಧಿ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ಅಲಂಕಾರ್ ಸವಾಯಿ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಪ್ರಕರಣದಲ್ಲಿ ಇತ್ತೀಚಿಗೆ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಅವರನ್ನು ಗುಜರಾತ್ ನಲ್ಲಿ ಇಡಿ ಬಂಧಿಸಿತ್ತು.
ಮೂರು ದಿನಗಳ ಹಿಂದೆ ಅಹಮದಾಬಾದ್‌ನಲ್ಲಿ ಗೋಖಲೆ ವಿಚಾರಣೆ ಎದುರಿಸಿದರು ಎಂದು ಅವರು ಹೇಳಿದ್ದಾರೆ. ಕ್ರೌಡ್ ಫಂಡಿಂಗ್ ಮೂಲಕ ನಿಧಿ ಸಂಗ್ರಹಿಸುವಲ್ಲಿ ಅಕ್ರಮದ ಆರೋಪದಲ್ಲಿ ಗೋಖಲೆಯನ್ನು ಜನವರಿ 25 ರಂದು ಬಂಧಿಸಿದ ನಂತರ ತನಿಖಾ ಸಂಸ್ಥೆ ಸವಾಯಿ ಅವರಿಗೆ ಸಮನ್ಸ್ ನೀಡಿತ್ತು.
ಒಂದು ವರ್ಷದ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ 23.54 ಲಕ್ಷ ರೂ.ಗಳನ್ನು ಜಮಾ ಮಾಡಿರುವ ಕುರಿತು ಪ್ರಶ್ನಿಸಿದಾಗ ಇದನ್ನು ಸಾಮಾಜಿಕ ಮಾಧ್ಯಮಗಳ ಕೆಲಸ ಮತ್ತಿತರ ಕಾರಣದಿಂದ ಕಾಂಗ್ರೆಸ್ ಪಕ್ಷದ ಅಲಂಕಾರ್ ಸವಾಯಿ ನೀಡಿರುವುದಾಗಿ ಅಲಹಾಬಾದ್ ಕೋರ್ಟ್ ನಲ್ಲಿ ಗೋಖಲೆ ಮಾಹಿತಿ ನೀಡಿದ್ದಾರೆ.
ಗೋಖಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರಾಗಿದ್ದಾಗ ಈ ನಗದು ಸ್ವೀಕರಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಇದೇ ಕಾರಣದಿಂದ ಸವಾಯಿ ಅವರನ್ನು ಇಡಿ ಬಂಧಿಸಿದ್ದು, ಅವರ ಹೇಳಿಕೆಯನ್ನು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದ ನಂಟಿನ ಬಗ್ಗೆ ಇನ್ನೂ ಹಲವರನ್ನು ಇಡಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.