ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಅಸ್ತು, ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರ ನೇಮಕ

ಕಳೆದ ವರ್ಷ ಡಿಸೆಂಬರ್ 13 ರಂದು ಕೊಲಿಜಿಯಂ ಶಿಫಾರಸು ಮಾಡಿದ್ದ ಹೆಸರುಗಳಿಗೆ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದ್ದು, ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರು ನೇಮಕಗೊಂಡಿದ್ದಾರೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಕಳೆದ ವರ್ಷ ಡಿಸೆಂಬರ್ 13 ರಂದು ಕೊಲಿಜಿಯಂ ಶಿಫಾರಸು ಮಾಡಿದ್ದ ಹೆಸರುಗಳಿಗೆ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದ್ದು, ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರು ನೇಮಕಗೊಂಡಿದ್ದಾರೆ. 

ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಾಲ್, ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ವಿ ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಟ್ವೀಟ್ ಮಾಡಿದ್ದಾರೆ.

ಮುಂದಿನ ವಾರದ ಆರಂಭದಲ್ಲಿ ಈ ಐವರು ನ್ಯಾಯಾಧೀಶರು ಪ್ರಮಾಣ ವಚನ ಸ್ವೀಕರಿಸಿಲಿದ್ದು, ಇದರೊಂದಿಗೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಒಟ್ಟು ಸಂಖ್ಯೆ 32ಕ್ಕೆ ಏರಿಕೆಯಾಗಲಿದೆ.

ಪ್ರಸ್ತುತ, ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 27 ನ್ಯಾಯಾಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡುವ ನ್ಯಾಯಾಧೀಶರನ್ನು ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಐವರು ನ್ಯಾಯಾಧೀಶರ ನೇಮಕಾತಿಗೆ ಒಪ್ಪಿಗೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com