ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 113 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 113 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,817ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಕೊರೋನಾ ವೈರಸ್ (ಸಂಗ್ರಹ ಚಿತ್ರ)
ಕೊರೋನಾ ವೈರಸ್ (ಸಂಗ್ರಹ ಚಿತ್ರ)

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 113 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,817ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈವರೆಗೆ 5,30,745 ಮಂದಿ ಮೃತಪಟ್ಟಿದ್ದು, ಒಟ್ಟು ಸೋಂಕು ಪ್ರಕರಣಗಳು 4,46,83,363ಕ್ಕೆ ಏರಿಕೆಯಾಗಿವೆ.

ದೈನಂದಿನ ಪಾಸಿಟಿವಿಟಿ ದರ ಶೇ 0.09ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಸೇ 0.08 ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ಈವರೆಗೆ 4,41,50,801 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.09ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.57 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com