ಐವರು ನೂತನ ಸುಪ್ರೀಂಕೋರ್ಟ್ ನ್ಯಾಯಾಧೀಶರು ಸೋಮವಾರ ಪ್ರಮಾಣ ವಚನ ಸ್ವೀಕಾರ
ಐವರು ನೂತನ ಸುಪ್ರೀಂಕೋರ್ಟ್ ನ್ಯಾಯಾಧೀಶರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ನ್ಯಾಯಮೂರ್ತಿ ಪಂಕಜ್ ಮಿಥಾಲ್ ನ್ಯಾಯಮೂರ್ತಿ ಸಂಜಯ್ ಕರೋಲ್. ಪಿ.ವಿ. ಸಂಜಯ್ ಕುಮಾರ್ ಸೇರಿದಂತೆ ಇತರ ಇಬ್ಬರು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Published: 05th February 2023 07:01 PM | Last Updated: 05th February 2023 07:01 PM | A+A A-

ಸುಪ್ರೀಂಕೋರ್ಟ್
ನವದೆಹಲಿ: ಐವರು ನೂತನ ಸುಪ್ರೀಂಕೋರ್ಟ್ ನ್ಯಾಯಾಧೀಶರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಪಂಕಜ್ ಮಿಥಾಲ್ ( ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾಯಮೂರ್ತಿ ಸಂಜಯ್ ಕರೋಲ್ ( ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್ ( ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ) ಸೇರಿದಂತೆ ಇತರ ಇಬ್ಬರು ಹಿರಿಯ ಹೈಕೋರ್ಟ್ ನ್ಯಾಯಾಧೀಶರರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ 13 ರಂದು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಹುದ್ದೆಗೆ ಎಲ್ಲಾ ಐದು ಹೆಸರುಗಳನ್ನು ಶಿಫಾರಸು ಮಾಡಿತ್ತು.
ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ( ನ್ಯಾಯಾಧೀಶರು ಪಾಟ್ನಾ ಹೈಕೋರ್ಟ್) ನ್ಯಾಯಮೂರ್ತಿ ಮನೋಜ್ ಮಿಶ್ರಾ ( ನ್ಯಾಯಮೂರ್ತಿ ಮನೋಜ್ ಮಿಶ್ರಾ( ನ್ಯಾಯಾಧೀಶರು ಅಲಹಾಬಾದ್ ಹೈಕೋರ್ಟ್) ಕೂಡಾ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ನ ಹೊಸ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಎಲ್ಲಾ ನೂತನ ನ್ಯಾಯಾಧೀಶರಿಗೆ ದೇಶದ ಮುಖ್ಯ ನ್ಯಾಯಮೂರ್ತಿ ಪ್ರಮಾಣ ವಚನ ಬೋಧಿಸಲಿದ್ದಾರೆ.
ಶನಿವಾರದಂದು ಕೇಂದ್ರದಿಂದ ಅಧಿಕೃತವಾಗಿ ನೂತನ ನ್ಯಾಯಾಧೀಶರ ಹೆಸರುಗಳನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಇರುವ 27 ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಲ್ಲಿ ಎಂಟು ಮಂದಿ 2023ರಲ್ಲಿ ಅಧಿಕಾರ ತ್ಯಜಿಸಲಿದ್ದಾರೆ.