ನೇಮಕಾತಿ 2023: ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ; ವಿದ್ಯಾರ್ಹತೆ SSLC

ಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್‌ ಮ್ಯಾನ್‌ (ಗ್ರಾಮೀಣ ಡಾಕ್‌ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. 
ಅಂಚೆ ಕಚೇರಿ
ಅಂಚೆ ಕಚೇರಿ

ಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್‌ ಮ್ಯಾನ್‌ (ಗ್ರಾಮೀಣ ಡಾಕ್‌ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. 

ಹುದ್ದೆಗಳ ಸಂಖ್ಯೆ: 40,889 (ದೇಶದಲ್ಲಿ) 3036 (ಕರ್ನಾಟಕದಲ್ಲಿ)

ಹುದ್ದೆಗಳು ಮತ್ತು ವೇತನ
ಬ್ರ್ಯಾಂಚ್‌ ಪೋಸ್ಟ್‌ಮಾಸ್ಟರ್‌: 12,000-29,380 ರೂ
ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್: 10,000-24,470 ರೂ
ಪೋಸ್ಟ್‌ಮ್ಯಾನ್‌: 10,000-24,470 ರೂ

ವಿದ್ಯಾರ್ಹತೆ: 
ಕನಿಷ್ಠ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ಆಸಕ್ತರು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
ಗರಿಷ್ಠ 40 ವರ್ಷ ಮೀರಿರಬಾರದು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: 
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡಿ, ನಂತರ ಮೆರಿಟ್ ಪಟ್ಟಿ ತಯಾರು ಮಾಡಲಾಗುತ್ತದೆ. ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ: 100 ರೂ

ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 16-02-2023

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: https://indiapostgdsonline.gov.in

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com