ವೈದ್ಯರು, ಆರೋಗ್ಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಗೆ ಪ್ರತ್ಯೇಕ ಕಾನೂನು ಇಲ್ಲ: ಕೇಂದ್ರ
ವೈದ್ಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಯಲು ಯಾವುದೇ ಪ್ರತ್ಯೇಕ ಕಾನೂನು ಜಾರಿಗೊಳಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ.
Published: 07th February 2023 11:23 PM | Last Updated: 07th February 2023 11:23 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ವೈದ್ಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಯಲು ಯಾವುದೇ ಪ್ರತ್ಯೇಕ ಕಾನೂನು ಜಾರಿಗೊಳಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ.
ಈ ಕುರಿತು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು, ಆರೋಗ್ಯ ಸೇವಾ ಸಿಬ್ಬಂದಿ ಮತ್ತು ಕ್ಲಿನಿಕಲ್ ಸಂಸ್ಥೆಗಳ(ದೌರ್ಜನ್ಯ ಮತ್ತು ಆಸ್ತಿ ಹಾನಿ ತಡೆ) ಮಸೂದೆ, 2019ರ ಕರಡು ಸಿದ್ಧಪಡಿಸಲಾಗಿದೆ ಮತ್ತು ಸಂಬಂಧಪಟ್ಟವರಿಗೆ ಅದನ್ನು ವಿತರಿಸಲಾಗಿದೆ ಎಂದು ಹೇಳಿದರು.
ಇದನ್ನು ಓದಿ: ಇತರ ರಾಜ್ಯಗಳಲ್ಲಿ ನೀಡುತ್ತಿರುವಂತೆ ಸಮಾನ ವೇತನಕ್ಕೆ ಕರ್ನಾಟಕದ ವೈದ್ಯರ ಒತ್ತಾಯ
"ನಂತರ ವೈದ್ಯರು ಮತ್ತು ಇತರ ಆರೋಗ್ಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಗೆ ಪ್ರತ್ಯೇಕ ಕಾನೂನನ್ನು ಜಾರಿಗೊಳಿಸದಿರಲು ನಿರ್ಧರಿಸಲಾಯಿತು" ಎಂದು ಸಚಿವರು ತಿಳಿಸಿದರು.
ಸಂಬಂಧಿತ ಸಚಿವಾಲಯಗಳು ಮತ್ತು ಸರ್ಕಾರದ ಇಲಾಖೆಗಳು ಮತ್ತು ಎಲ್ಲಾ ತಜ್ಞರೊಂದಿಗೆ ಈ ವಿಷಯದ ಬಗ್ಗೆ ಮತ್ತಷ್ಟು ಚರ್ಚಿಸಲಾಗಿದೆ ಮತ್ತು ಸಾಂಕ್ರಾಮಿಕ ರೋಗಗಳ(ತಿದ್ದುಪಡಿ) ಸುಗ್ರೀವಾಜ್ಞೆ, 2020 ಎಂಬ ಸುಗ್ರೀವಾಜ್ಞೆಯನ್ನು ಏಪ್ರಿಲ್ 22, 2020 ರಂದು ಹೊರಡಿಸಲಾಯಿತು ಎಂದು ಮಾಂಡವಿಯಾ ಹೇಳಿದರು.