ಮದ್ರಾಸ್ ಹೈ ಕೋರ್ಟ್ ನ್ಯಾಯಮೂರ್ತಿಯಾಗಿ ವಿಕ್ಟೋರಿಯಾ ಗೌರಿ ನೇಮಕ: ಸುಪ್ರೀಂ ಕೋರ್ಟ್ ನಲ್ಲಿ' ತಕರಾರು ಅರ್ಜಿ ವಜಾ

ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ನೇಮಕದ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆ ವಿಕ್ಟೋರಿಯಾ ಗೌರಿ
ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆ ವಿಕ್ಟೋರಿಯಾ ಗೌರಿ

ನವದೆಹಲಿ: ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ನೇಮಕದ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ವಕೀಲೆ ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಡೆ ನೀಡಲು ಕೋರ್ಟ್ ನಿರಾಕರಿಸಿದ್ದು,  ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಕೀಲೆ ವಿಕ್ಟೋರಿಯಾ ಗೌರಿ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. 

ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡುವ ಕುರಿತ ಶಿಫಾರಸನ್ನು ಮರುಪರಿಶೀಲಿಸುವಂತೆ ಕೊಲಿಜಿಯಂಗೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಇದೇ ವೇಳೆ ಹೇಳಿದೆ. ಅಂತೆಯೇ ಕಾರ್ಯನಿರ್ವಹಣೆ ತೃಪ್ತಿಕರವಾಗಿಲ್ಲದಿದ್ದಾಗ ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ಮಾಡಿದ ಹಲವು ನಿದರ್ಶನಗಳಿವೆ ಎಂದು ನ್ಯಾಯಾಲಯ ಹೇಳಿದೆ.

ತಕರಾರು ಅರ್ಜಿ ವಿಚಾರಣೆ ಹೊರತಾಗಿಯೂ ಪ್ರಮಾಣ ವಚನ ಸ್ವೀಕರಿಸಿದ್ದ ವಿಕ್ಟೋರಿಯಾ ಗೌರಿ..
ಅತ್ತ ಸುಪ್ರೀಂ ಕೋರ್ಟ್ ನಲ್ಲಿ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡುವ ಕುರಿತ ಶಿಫಾರಸನ್ನು ಮರುಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಯುತ್ತಿರುವಂತೆಯೇ ಇತ್ತ ವಿಕ್ಟೋರಿಯಾ ಗೌರಿ ಅವರು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com