Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.
ನಿತಿನ್ ಗಡ್ಕರಿ-ಪ್ರತಾಪ್ ಸಿಂಹ
ನಿತಿನ್ ಗಡ್ಕರಿ-ಪ್ರತಾಪ್ ಸಿಂಹ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ, ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್​ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196.05 ಕೋಟಿ ರೂಪಾಯಿ. 

ಇಪಿಸಿ ಮಾದರಿಯಲ್ಲಿ ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್​ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆಗೆ 957.09 ಕೋಟಿ ರೂಪಾಯಿ ಅನುದಾನ.

ಕೊಪ್ಪಳ ಮತ್ತು ಗದಗ್​ನಲ್ಲಿ ರಾಹೆ-367ರ ಗಡ್ಡನಕೇರಿ ಸೆಕ್ಷನ್​ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆಗೆ 333.96 ಕೋಟಿ ರೂ. ಹಾಗೂ ಬಾಗಲಕೋಟೆ ಜಿಲ್ಲೆ ರಾಹೆ-367: ಸರ್ಜಾಪುರದಿಂದ ಪಟ್ಟದಕಲ್ಲು ರಸ್ತೆ ಅಗಲೀಕರಣ ಯೋಜನೆಗೆ 445.62 ಕೋಟಿ ರೂಪಾಯಿ ಬಿಡುಗಡೆ.

ಮೈಸೂರು ಜಿಲ್ಲೆಯ ಕುಶಾಲನಗರ ಬೈಪಾಸ್‌ನ ಪ್ರಾರಂಭದಲ್ಲಿ ಗುಡ್ಡೆಹೊಸೂರು ಬಳಿಯ NH-275 ರ ಕುಶಾಲನಗರ ಭಾಗದವರೆಗೆ ಮೈಸೂರಿನಿಂದ ಸುಸಜ್ಜಿತ ನಾಲ್ಕು ಪಥ ರಸ್ತೆ ಅಗಲೀಕರಣ ಯೋಜನೆಗೆ 909.86 ಕೋಟಿ ರೂಪಾಯಿ ಬಜೆಟ್‌ನಲ್ಲಿ ಮಂಜೂರು ಮಾಡಲಾಗಿದೆ. ಅಲ್ಲದೆ ಮೈಸೂರಿಗೆ ಹೆಚ್ಚುವರಿಯಾಗಿ 739.39 ಕೋಟಿ ರೂ. ನೀಡಲಾಗಿದ್ದು ಯಲವಾಲ ಕೆಆರ್ ನಗರ ರಸ್ತೆ ಜಂಕ್ಷನ್​ನಲ್ಲಿ ನಾಲ್ಕು ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ.

ಯೋಜನೆಗೆ ಅನುದಾನ ಮಂಜೂರು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಕುಶಾಲನಗರ ಹೆದ್ದಾರಿಗೆ ₹ 4,000 ಕೋಟಿ ವೆಚ್ಚದ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com