ಗಾಜಿಯಾಬಾದ್ ಕ್ಲಿನಿಕ್ ನಲ್ಲಿ ವೈದ್ಯರೊಬ್ಬರಿಗೆ ಗುಂಡಿಕ್ಕೆ ಹತ್ಯೆ, ಶೂಟರ್ ಪರಾರಿ

ಗಾಜಿಯಾಬಾದ್‌ನ ಮುರಾದ್‌ನಗರದಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕ್ಲಿನಿಕ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗುಂಡಿನ ದಾಳಿಯಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗಾಜಿಯಾಬಾದ್: ಗಾಜಿಯಾಬಾದ್‌ನ ಮುರಾದ್‌ನಗರದಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕ್ಲಿನಿಕ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ.

ಮುರಾದ್‌ನಗರದ ರಾಜವೀರ್ ವಲಿ ಗಲಿ ನಿವಾಸಿ ಡಾ.ಶಂಶಾದ್ ಅವರು ಭಾನುವಾರ ರಾತ್ರಿ 10:30ರ ಸುಮಾರಿಗೆ ತಮ್ಮ ಕ್ಲಿನಿಕ್‌ ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಈ ವೇಳೆ ಕ್ಲಿನಿಕ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ಡಾಕ್ಟರ್ ಶಂಶಾದ್ ಅವರ ಮೇಲೆ ಎರಡು ಬಾರಿ ಗುಂಡು ಹಾರಿಸಿದ್ದಾನೆ ಎಂದು ಗ್ರಾಮಾಂತರ ಡಿಸಿಪಿ ರವಿಕುಮಾರ್ ಅವರು ತಿಳಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಡಾಕ್ಟರ್ ಶಂಶಾದ್ ಅವರನ್ನು ಜನ ತರಾತುರಿಯಲ್ಲಿ ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ಗ್ರಾಮಾಂತರ ಪೊಲೀಸ್ ಸಿಬ್ಬಂದಿಯೊಂದಿಗೆ ಉಪ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ ಎಂದು ಗ್ರಾಮಾಂತರ ಡಿಸಿಪಿ ರವಿಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com