ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪ, ಯಾವುದೇ ಜೀವ ಹಾನಿ ಇಲ್ಲ
ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪಕ್ಕೆ 28 ಸಾವಿರಕ್ಕೂ ಹೆಚ್ಚು ಜನ ಸಾವಿಗೀಡಾಗಿರುವ ಬೆನ್ನಲ್ಲೇ ಅಸ್ಸಾಂನ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪನದಲ್ಲಿ 4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕೃತ ಬುಲೆಟಿನ್ ತಿಳಿಸಿದೆ.
Published: 12th February 2023 07:14 PM | Last Updated: 12th February 2023 07:14 PM | A+A A-

ಸಾಂದರ್ಭಿಕ ಚಿತ್ರ
ದಿಸ್ಪುರ: ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪಕ್ಕೆ 28 ಸಾವಿರಕ್ಕೂ ಹೆಚ್ಚು ಜನ ಸಾವಿಗೀಡಾಗಿರುವ ಬೆನ್ನಲ್ಲೇ ಅಸ್ಸಾಂನ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪನದಲ್ಲಿ 4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕೃತ ಬುಲೆಟಿನ್ ತಿಳಿಸಿದೆ.
ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಇದನ್ನು ಓದಿ: ಟರ್ಕಿ-ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಲಿದೆ - ವಿಶ್ವಸಂಸ್ಥೆ
ಇಂದು ಸಂಜೆ 4:18 ಕ್ಕೆ ಭೂಮಿ ಕಂಪಿಸಿದ್ದು, ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ನಾಗಾನ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಕಂಪವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.
ಕೇಂದ್ರ ಅಸ್ಸಾಂನ ಹೊಜೈ ಬಳಿ ಗುವಾಹಟಿಯಿಂದ ಪೂರ್ವಕ್ಕೆ 160 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.