ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅಧಿಕೃತ ನಿವಾಸದ ಬಳಿ ಬೆಂಕಿ

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಅಧಿಕೃತ ನಿವಾಸದಿಂದ ಸುಮಾರು 200 ಮೀಟರ್ ದೂರದಲ್ಲಿರುವ ಪಾರಂಪರಿಕ ಹಳೆಯ ಕಟ್ಟಡದಲ್ಲಿ ಇಂದು ಮುಂಜಾನೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.
ಪಾರಂಪರಿಕ ಕಟ್ಟಡದಲ್ಲಿ ಬೆಂಕಿಯ ಚಿತ್ರ
ಪಾರಂಪರಿಕ ಕಟ್ಟಡದಲ್ಲಿ ಬೆಂಕಿಯ ಚಿತ್ರ

ಶಿಮ್ಲಾ: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಅಧಿಕೃತ ನಿವಾಸದಿಂದ ಸುಮಾರು 200 ಮೀಟರ್ ದೂರದಲ್ಲಿರುವ ಪಾರಂಪರಿಕ ಹಳೆಯ ಕಟ್ಟಡದಲ್ಲಿ ಇಂದು ಮುಂಜಾನೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.

ಮುಂಜಾನೆ 4-30ರ ಸುಮಾರಿನಲ್ಲಿ ಬೆಂಕಿ ತಗುಲಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಿಸಲಾಗಿದೆ ಆದಾಗ್ಯೂ, ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಇನ್ನೂ ಹೊಗೆಯಾಡುತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಟ್ಟಡದ ಮಾಲೀಕರು ಹಾಗೂ ಮೇಲ್ವಿಚಾರಕರು ಇಬ್ಬರೂ ದೆಹಲಿಯಲ್ಲಿದ್ದರಿಂದ ಅಗ್ನಿ ಅನಾಹುತದಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಂಕಿ ಬಿದ್ದ ಕಟ್ಟಡವನ್ನು ಪಿರ್ ಗ್ರೋವ್ ಎಂದು ಕರೆಯಲಾಗುತಿದ್ದು, ಶಿಮ್ಲಾದಲ್ಲಿರುವ ಸಿಎಂ ಅಧಿಕೃತ ನಿವಾಸದಿಂದ ಸ್ವಲ್ಪ ದೂರದಲ್ಲಿದೆ. ಬೆಂಕಿ ಕ್ಷಣಾರ್ಧದಲ್ಲಿ ವೇಗವಾಗಿ ಇಡೀ ಕಟ್ಟಡ ತುಂಬ ಆವರಿಸಿತು. ಬೆಂಕಿಯಿಂದಾದ ನಷ್ಟದ ಅಂದಾಜಿನ ಬಗ್ಗೆ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.  ಮಹಾತ್ಮ ಗಾಂಧಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಶಿಮ್ಲಾಕ್ಕೆ ಭೇಟಿ ನೀಡಿದ್ದಾಗ ಈ ಕಟ್ಟಡದಲ್ಲಿ ತಂಗಿದ್ದರು ಎಂದು ಹೇಳಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com