ಜಮ್ಮು-ಕಾಶ್ಮೀರದಲ್ಲಿ ಉದ್ಯೋಗ, ಪ್ರೀತಿ ಬದಲು ಬಿಜೆಪಿಯ ಬುಲ್ಡೋಜರ್- ರಾಹುಲ್ ಗಾಂಧಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮ ತೆರವು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತು ಬಿಜೆಪಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರಾಡಳಿತ ಪ್ರದೇಶ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿಯನ್ನು ಬಯಸಿದೆ. ಆದರೆ ಅದರ ಬದಲಿಗೆ 'ಬಿಜೆಪಿಯ ಬುಲ್ಡೋಜರ್' ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
Published: 12th February 2023 12:30 PM | Last Updated: 12th February 2023 12:36 PM | A+A A-

ರಾಹುಲ್ ಗಾಂಧಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮ ತೆರವು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತು ಬಿಜೆಪಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರಾಡಳಿತ ಪ್ರದೇಶ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿಯನ್ನು ಬಯಸಿದೆ. ಆದರೆ ಅದರ ಬದಲಿಗೆ 'ಬಿಜೆಪಿಯ ಬುಲ್ಡೋಜರ್' ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ನ್ಯಾಶನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಗಳು ಈ ಅತಿಕ್ರಮ ತೆರವು ವಿರುದ್ಧ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿವೆ ಮತ್ತು ತಕ್ಷಣ ಅದನ್ನು ನಿಲ್ಲಿಸುವಂತೆ ಒತ್ತಾಯಿಸಿವೆ.
ಕಂದಾಯ ಇಲಾಖೆ ಕಮಿಷನರ್ ಸೆಕ್ರೆಟರಿ ವಿಜಯ್ ಕುಮಾರ್ ಬಿಧುರಿ, ಜಮ್ಮು ಮತ್ತು ಕಾಶ್ಮೀರದಾದ್ಯಂತ ಶೇ.100 ರಷ್ಟು ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ನಂತರ ಅಧಿಕಾರಿಗಳು ಇದುವರೆಗೆ 10 ಲಕ್ಷಕ್ಕೂ ಹೆಚ್ಚು ಕನಾಲ್ (ಒಂದು ಕೆನಾಲ್ = 605 ಚದರ ಗಜ) ಭೂಮಿಯನ್ನು ಹಿಂಪಡೆದಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಗಾಂಧಿ, "ಜಮ್ಮು ಮತ್ತು ಕಾಶ್ಮೀರಕ್ಕೆ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿ ಬೇಕಿತ್ತು, ಆದರೆ ಅವರಿಗೆ ಏನು ಸಿಕ್ಕಿತು? ಬಿಜೆಪಿಯ ಬುಲ್ಡೋಜರ್!" ಹಲವು ದಶಕಗಳಿಂದ ಜನರು ತಮ್ಮ ಶ್ರಮದಿಂದ ಬೆಳೆಸಿದ ಭೂಮಿಯನ್ನು ಅವರಿಂದ ಕಿತ್ತುಕೊಳ್ಳಲಾಗುತ್ತಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಆರೋಪಿಸಿದ್ದಾರೆ.
ಜನರನ್ನು ವಿಭಜಿಸದೆ ಒಗ್ಗೂಡಿಸುವ ಮೂಲಕ ಶಾಂತಿ ಮತ್ತು ಕಾಶ್ಮೀರವನ್ನು ರಕ್ಷಿಸಲಾಗುವುದು ಎಂದು ಅವರು ಹೇಳಿದ್ದಾರೆ. ತೆರವು ಕಾರ್ಯಾಚರಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಹೇಳುವ ಮಾಧ್ಯಮ ವರದಿಯನ್ನು ಗಾಂಧಿ ಟ್ಯಾಗ್ ಮಾಡಿದ್ದಾರೆ.