ಮಹಾರಾಷ್ಟ್ರ: ರಾಜ್ಯಪಾಲರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು, 13 ನೂತನ ರಾಜ್ಯಪಾಲರ ನೇಮಕ

ನಿರೀಕ್ಷಿತ ಬೆಳವಣಿಗೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 
ದ್ರೌಪದಿ ಮುರ್ಮು
ದ್ರೌಪದಿ ಮುರ್ಮು

ಮುಂಬೈ: ನಿರೀಕ್ಷಿತ ಬೆಳವಣಿಗೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 

ಇದೇ ವೇಳೆ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಮಹಾರಾಷ್ಟ್ರದ ನೂತನ ರಾಜ್ಯಪಾಲರನ್ನಾಗಿ ವರ್ಗಾಯಿಸಿದ್ದಾರೆ ಎಂದು ಇಂದು ಬೆಳಗ್ಗೆ ಅಧಿಕೃತ ಪ್ರಕಟಣೆ ತಿಳಿಸಿದೆ.

ತ್ರಿಪುರಾದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದ 75 ವರ್ಷದ ಬೈಸ್ ಅವರ ನೇಮಕವು ಅವರು ಮಹಾರಾಷ್ಟ್ರದಲ್ಲಿ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರಲಿದೆ.

ಮಹಾರಾಷ್ಟ್ರದ ರಾಜ್ಯಪಾಲರು ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ರಾಧಾಕೃಷ್ಣ ಮಾಥುರ್ ಅವರ ರಾಜೀನಾಮೆಯನ್ನು ಅಂಗೀಕರಿಸಿರುವ ರಾಷ್ಟ್ರಪತಿ ಮುರ್ಮು ಅವರು, 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ನೇಮಕ ಅಥವಾ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.

'ಭಾರತದ ರಾಷ್ಟ್ರಪತಿಗಳು ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶಿಯಾರಿ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಧಾ ಕೃಷ್ಣನ್ ಮಾಥುರ್ ಅವರ ರಾಜೀನಾಮೆಗಳನ್ನು ಅಂಗೀಕರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಕಟಣೆಯಲ್ಲಿನ ಇತರೆ ನೇಮಕ/ವರ್ಗಾವಣೆಗಳು

1. ಅರುಣಾಚಲ ಪ್ರದೇಶಕ್ಕೆ ಹೊಸ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ನೇಮಕವಾಗಿದ್ದಾರೆ. 

2. ಲಕ್ಷ್ಮಣ್ ಪ್ರಸಾದ್ ಆಚಾರ್ಯ ಸಿಕ್ಕಿಂ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.

3. ಸಿಪಿ ರಾಧಾಕೃಷ್ಣನ್ ಜಾರ್ಖಂಡ್ ಗವರ್ನರ್ ಆಗಿ ನೇಮಕ

4. ಶಿವ ಪ್ರತಾಪ್ ಶುಕ್ಲಾ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಕ

5. ಗುಲಾಬ್ ಚಾಂದ್ ಕಟಾರಿಯಾ ಅವರು ಅಸ್ಸಾಂ ರಾಜ್ಯಪಾಲರಾಗಿದ್ದಾರೆ.

6. ಕರ್ನಾಟಕ ಮೂಲದ ಎಸ್ ಅಬ್ದುಲ್ ನಜೀರ್ ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿದ್ದಾರೆ.

7. ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದ ಬಿಸ್ವಾ ಭುನ್ಸನ್ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ನೇಮಕ.

8. ಛತ್ತೀಸಗಢದ ರಾಜ್ಯಪಾಲರಾಗಿದ್ದ ಅನುಸೂಯಾ ಉಯಿಕ್ಯೆ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ.

9. ಮಣಿಪುರದ ರಾಜ್ಯಪಾಲರಾಗಿದ್ದ ಲಾ. ಗಣೇಶನ್ ಅವರನ್ನು ನಾಗಾಲ್ಯಾಂಡ್‌ನ ರಾಜ್ಯಪಾಲರನ್ನಾಗಿ ನೇಮಕ.

10. ಬಿಹಾರದ ರಾಜ್ಯಪಾಲರಾದ ಫಗು ಚೌಹಾಣ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

11. ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

12. ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

13. ಅರುಣಾಚಲ ಪ್ರದೇಶದ ಗವರ್ನರ್ ಬಿ.ಡಿ. ಮಿಶ್ರಾ (ನಿವೃತ್ತ) ಅವರು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com