ಅಪರಿಚಿತ ವ್ಯಕ್ತಿಗಳೊಂದಿಗೆ ಗುಂಡಿನ ಕಾಳಗ: ಇಬ್ಬರು ಜಾರ್ಖಂಡ್ ಪೊಲೀಸರ ಹತ್ಯೆ
ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Published: 12th February 2023 01:52 PM | Last Updated: 12th February 2023 02:09 PM | A+A A-

ಸಾಂದರ್ಭಿಕ ಚಿತ್ರ
ದಿಯೋಘರ್: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ರಾಂಚಿಯಿಂದ 250 ಕಿ. ಮೀ ದೂರದಲ್ಲಿರುವ ದಿಯೋಘರ್ ಪಟ್ಟಣದ ಶ್ಯಾಮ್‌ಗಂಜ್ ರಸ್ತೆಯಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಈ ಘಟನೆ ನಡೆದಿದೆ.
ಕೆಲವು ದಿನಗಳ ಹಿಂದೆ ಮತ್ತೊಂದು ದಾಳಿಯ ನಂತರ ಆಡಳಿತದಿಂದ ಭದ್ರತೆ ಕೋರಿದ್ದ ಸ್ಥಳೀಯ ಮೀನು ವ್ಯಾಪಾರಿಯೊಬ್ಬರ ಮನೆಯ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾಗ ಈ ಘಟನೆ ನಡೆರುವುದಾಗಿ ಎಸ್ ಪಿ ಸುಭಾಶ್ ಚಂದ್ರ ಜಾಟ್ ಹೇಳಿದ್ದಾರೆ. ಮೃತ ಪೊಲೀಸ್ ಸಿಬ್ಬಂದಿಯನ್ನು ಸಾಹಿಬ್‌ಗಂಜ್ ಜಿಲ್ಲೆಯ ನಿವಾಸಿಗಳಾದ ರವಿಕುಮಾರ್ ಮಿಶ್ರಾ ಮತ್ತು ಸಂತೋಷ್ ಯಾದವ್ ಎಂದು ಗುರುತಿಸಲಾಗಿದೆ.
ಮೃತ ಪೊಲೀಸರನ್ನು ವ್ಯಾಪಾರಿಯ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಅಪರಿಚಿತ ವ್ಯಕ್ತಿಗಳು ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದಾಗ ಪ್ರತಿದಾಳಿ ನಡೆಸಿದ್ದಾರೆ ಆದರೆ, ಆಗ ಪೊಲೀಸರು ಹತ್ಯೆಯಾಗಿದ್ದು, ಮೀನು ವ್ಯಾಪಾರಿಯ ಮನೆಯಲ್ಲಿದ್ದ ಇತರ ಮೂವರು ಘಟನೆಯಲ್ಲಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಸ್ಥಿರವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.