ಟರ್ಕಿ ಬೆನ್ನಲ್ಲೇ ಸಿಕ್ಕಿಂನಲ್ಲೂ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಸಿಕ್ಕಿನಲ್ಲೂ ಭೂಕಂಪನದ ಅನುಭವವಾಗಿದೆ.
Published: 13th February 2023 11:09 AM | Last Updated: 13th February 2023 01:30 PM | A+A A-

ಸಂಗ್ರಹ ಚಿತ್ರ
ಸಿಕ್ಕಿಂ: ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಸಿಕ್ಕಿನಲ್ಲೂ ಭೂಕಂಪನದ ಅನುಭವವಾಗಿದೆ.
ಸಿಕ್ಕಿಂನ ಉತ್ತರಕ್ಕೆ 70 ಕಿಲೋ ಮೀಟರ್ ದೂರದಲ್ಲಿರುವ ಯುಕ್ಸೋಮ್ ಎಂಬಲ್ಲಿ ಇಂದು ಬೆಳಗಿನ ಜಾವ 4.15 ರ ಸುಮಾರಿಗೆ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 4.3 ರಷ್ಟು ದಾಖಲಾಗಿದೆ.
ಇದನ್ನೂ ಓದಿ: ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪ, ಯಾವುದೇ ಜೀವ ಹಾನಿ ಇಲ್ಲ
ಭೂಕಂಪನದ ಕೇಂದ್ರವು ಯುಕ್ಸೋಮ್‌ನಿಂದ 70 ಕಿ.ಮೀ ದೂರದಲ್ಲಿದೆ. ಭೂಮಿಯ ಒಳಭಾಗದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಸದ್ಯಕ್ಕೆ ಪ್ರಾಣ ಹಾನಿ ಮತ್ತು ಆಸ್ತಿ-ಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.